p>

ಪುಲ್ವಾಮ ದಾಳಿಯಲ್ಲಿ ಹುತಾತ್ಮರಾದ ಯೋಧರಿಗೆ ನಮನ

0

ಅಖಿಲ ಭಾರತೀಯ ಅಧಿವಕ್ತಾ ಪರಿಷತ್ ಸುಳ್ಯ ಹಾಗೂ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಸುಳ್ಯದ ವತಿಯಿಂದ ಫೆ 14 ರಂದು ಚೆನ್ನಕೇಶವ ದೇವಸ್ಥಾನದ ಸಭಾಂಗಣದಲ್ಲಿ ಪುಲ್ವಾಮಾ ದಾಳಿಯಲ್ಲಿ ಹುತಾತ್ಮರಾದ ವೀರ ಯೋಧರಿಗೆ ನುಡಿ ನಮನ ಸಲ್ಲಿಸಲಾಯಿತು.

ಕಾರ್ಯಕ್ರಮ ಉದ್ದೇಶಿಸಿ ಉಪನ್ಯಾಸಕರಾದ ಪದ್ಮ ಕುಮಾರ್ ಮತ್ತು ಅಧಿವಕ್ತಾ ಪರಿಷತ್ ಜಿಲ್ಲಾ ಉಪಾಧ್ಯಕ್ಷರು, ಸುಳ್ಯ ವಕೀಲರ ಸಂಘದ ಕೋಶಾಧಿಕಾರಿ ಜಗದೀಶ್ ಡಿ.ಪಿ.,ಮಾತನಾಡಿದರು,ಅಧಿವಕ್ತಾ ಪರಿಷತ್ತಿನ ತಾಲೂಕು ಅಧ್ಯಕ್ಷರಾದ ನ್ಯಾಯವಾದಿ ಹರೀಶ್ ಬೂಡುಪನ್ನೆ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಅಧಿವಕ್ತಾ ಪರಿಷತ್ತಿನ ಪದಾಧಿಕಾರಿಗಳು, ವಿದ್ಯಾರ್ಥಿ ಪರಿಷತ್ತಿನ ಕಾರ್ಯಕರ್ತರು ಭಾಗವಹಿಸಿದ್ದರು. ರವೀಶ್ ಕೇವಳ ಕಾರ್ಯಕ್ರಮ ನಿರೂಪಿಸಿದರು.