ರವಿ ಚಳ್ಳಕೋಡಿ ರಾಷ್ಟ್ರಮಟ್ಟಕ್ಕೆ ಆಯ್ಕೆ

0

ಕೋಲಾರದಲ್ಲಿ ನಡೆದ ರಾಜ್ಯ ಮಟ್ಟದ 41ನೇ ಸಾಲಿನ ಮಾಸ್ಟರ್ ಅಥ್ಲೆಟಿಕ್ಸ್ ಚಾಂಪಿಯನ್ ಶಿಪ್ ನಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಿಂದ ಸ್ಪರ್ಧಿಸಿದ್ದ ಪಂಜದ ರವಿ ಚಳ್ಳಕೋಡಿ ಯವರು ರಾಜ್ಯ ಮಟ್ಟದಲ್ಲಿ ಮೂರು ಸ್ಪರ್ಧೆಗಳಲ್ಲಿ ವಿಜೇತರಾಗಿ ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಅವರು ಜಾವಲಿನ್,ಶಾಟ್ ಫುಟ್ ,ಡಿಸ್ಕಸ್ ತ್ರೊ ಸ್ಪರ್ಧೆಗಳಲ್ಲಿ ಸ್ಪರ್ಧಿಸಿದ್ದು ಈ ಮೂರು ಸ್ಪರ್ಧೆಗಳಲ್ಲೂ ದ್ವಿತೀಯ ಸ್ಥಾನ ಪಡೆದು ,ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಮಾ.27,28,29 ರಂದು ಜರುಗಲಿರುವ ರಾಷ್ಟ್ರ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.