ಪ್ರವೀಣ್ ಕುಮಾರ್ ಪವಿತ್ರಮಜಲುರವರು ರಾಷ್ಟ್ರಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆ

0

ಫೆಬ್ರವರಿ 11 ಮತ್ತು 12ರಂದು ಕೋಲಾರದ ಪೊಲೀಸ್ ಪೆರೇಡ್ ಗ್ರೌಂಡ್ ನಲ್ಲಿ ನಡೆದ 41ನೇ ರಾಜ್ಯ ಮಟ್ಟದ ಮಾಸ್ಟರ್ ಅಥ್ಲೆಟಿಕ್ ಚಾಂಪಿಯನ್ ಶಿಪ್ ನಲ್ಲಿ ಭಾಗವಹಿಸಿದ ಪ್ರವೀಣ್ ಕುಮಾರ್ ಪವಿತ್ರ ಮಜಲುರವರು 4*100 ಮೀಟರ್ ರಿಲೇಯಲ್ಲಿ ಪ್ರಥಮ ಸ್ಥಾನ, ಜಾವೆಲಿನ್ ಎಸೆತದಲ್ಲಿ ದ್ವಿತೀಯ ಸ್ಥಾನ, ಶಾಟ್ ಪುಟ್ ನಲ್ಲಿ ಮತ್ತು ಡಿಸ್ಕಸ್ ಎಸೆತದಲ್ಲಿ ತೃತೀಯ ಸ್ಥಾನ ಪಡೆದು ಮಾರ್ಚ್ ತಿಂಗಳಿನಲ್ಲಿ ಬೆಂಗಳೂರಿನ ಕಂಠೀರವ ಸ್ಟೇಡಿಯಂ ನಲ್ಲಿ ನಡೆಯುವ ರಾಷ್ಟ್ರಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ.