ದೇವಚಳ್ಳ : ಕಿರು ಬೀದಿ ನಾಟಕ ಪ್ರದರ್ಶನ

0

ಗ್ರಾಮ ಪಂಚಾಯತ್ ದೇವಚಳ್ಳ, ಪ್ರಾಥಮಿಕ ಆರೋಗ್ಯ ಕೇಂದ್ರ ಕೊಲ್ಲಮೊಗ್ರು, ಆರೋಗ್ಯ ಮತ್ತು ಕ್ಷೇಮ ಕೇಂದ್ರ ಎಲಿಮಲೆ ಇದರ ಜಂಟಿ ಆಶ್ರಯದಲ್ಲಿ ಸಾಮಾಜಿಕ ಪಿಡುಗು ಕಾರ್ಯಕ್ರಮ ಯೋಜನೆ ಅಡಿಯಲ್ಲಿ ಲಿಂಗ ಆಧರಿತ ದೌರ್ಜನ್ಯ ಎಂಬ ಕಿರು ಬೀದಿ ನಾಟಕ ಪ್ರದರ್ಶನವು ಫೆ.20ರಂದು ನಡೆಯಿತು.

ಎಲಿಮಲೆ ಪ್ರೌಢಶಾಲಾ ವಿದ್ಯಾರ್ಥಿಗಳು ಹಾಗೂ ಪ್ರಾಥಮಿಕ ಶಾಲೆ ವಿದ್ಯಾರ್ಥಿಗಳಿಂದ ಎಲಿಮಲೆಯಲ್ಲಿ ಪ್ರದರ್ಶಿಸಲಾಯಿತು.

ಕಾರ್ಯಕ್ರಮದಲ್ಲಿ ದೇವಚಳ್ಳ ಗ್ರಾಮಪಂಚಾಯತ್ ನ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು, ಆರೋಗ್ಯ ಇಲಾಖೆಯ ಸಿಬ್ಬಂದಿಗಳು, ಸ್ಥಳೀಯ ಶಾಲಾ ಮುಖ್ಯ ಮುಖ್ಯೋಪಾಧ್ಯಾಯರು, ಸಹ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು. ಭಾಗವಹಿಸಿದ ಶಾಲೆಗಳಿಗೆ & ವಿದ್ಯಾರ್ಥಿಗಳಿಗೆ ಸ್ಮರಣಿಕೆ ಹಾಗೂ ಪ್ರೋತ್ಸಾಹ ಬಹುಮಾನವನ್ನು ನೀಡಿ ಗೌರವಿಸಲಾಯಿತು. ಈ ಕಾರ್ಯಕ್ರಮವನ್ನು ಸಮುದಾಯ ಆರೋಗ್ಯ ಅಧಿಕಾರಿಗಳಾದ ಕುಮಾರಿ ಮೋನಿಷಾ ಜಿ.ಎಸ್. ಸ್ವಾಗತಿಸಿ ನಿರೂಪಿಸಿದರು. ಹಾಗೂ ಶೈಲೇಶ್ ಅಂಬೆಕಲ್ಲು ವಂದಿಸಿದರು.