ಸುಳ್ಯ :ಪೊಲೀಸ್ ಇಲಾಖೆ ವತಿಯಿಂದ ವ್ಯಾಪ್ತಿಗೊಳಪಟ್ಟ ಪ್ರದೇಶದಲ್ಲಿ ತನಿಖಾ ಕಾರ್ಯ, 28 ಪ್ರಕರಣಗಳು ದಾಖಲು

0

ಪೊಲೀಸ್ ಇಲಾಖೆಯ ನಿರ್ದೇಶನದಂತೆ ಸುಳ್ಯ ಪೊಲೀಸ್ ಅಧಿಕಾರಿಗಳ ನೇತೃತ್ವದಲ್ಲಿ ಠಾಣಾ ವ್ಯಾಪ್ತಿಗೊಳ ಪಟ್ಟ ಪ್ರದೇಶದಲ್ಲಿ ಪೊಲೀಸ್ ತನಿಕಾ ಕಾರ್ಯ ಮತ್ತು ಕಾನೂನು ಅರಿವು ಮಾಹಿತಿ ಕಾರ್ಯಕ್ರಮ ಫೆ. 22 ರಂದು ಸಂಜೆ ಗಾಂಧಿನಗರ ಪರಿಸರದಲ್ಲಿ ನಡೆಯಿತು.

ಸುಳ್ಯ ವೃತ್ತ ನಿರೀಕ್ಷಕರಾದ ರವೀಂದ್ರ ಸುಳ್ಯ ಪೊಲೀಸ್ ಠಾಣಾ ಉಪನಿರೀಕ್ಷಕ ದಿಲೀಪ್ ರವರ ನೇತೃತ್ವದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಪೊಲೀಸ್ ಅಧಿಕಾರಿಗಳು ಸಿಬ್ಬಂದಿಗಳು ಭಾಗವಹಿಸಿದ್ದರು.

ಈ ಸಂದರ್ಭದಲ್ಲಿ ತಪಾಶಣಾ ಕಾರ್ಯನಡೆಸಿ ಮಧ್ಯಪಾನ ಸೇವಿಸಿ ವಾಹನ ಚಾಲನೆ, ದಾಖಲೆ ಪತ್ರಗಳಿಲ್ಲದೆ ವಾಹನ ಚಾಲನೆ, ಪಾನ್ ಗುಟ್ಕ ಗಳನ್ನು ತಿಂದು ಸಾರ್ವಜನಿಕ ಸ್ಥಳಗಳಲ್ಲಿ ಉಗಿಯುವುದು, ಅನುಮಾನಾಸ್ಪದ ವ್ಯಕ್ತಿಗಳನ್ನು ತಪಾಷಣೆಗೊಳಪಡಿಸುವುದು, ಸಂಚಾರಿ ನಿಯಮವನ್ನು ಪಾಲಿಸದೆ ವಾಹನ ಚಲಾಯಿಸುವುದು,ಮುಂತಾದ ವಿಷಯಗಳು ಕುರಿತು ತಪಾಸಣೆ ನಡೆಸಿ ೨೮ಕ್ಕೂ ಹೆಚ್ಚು ಪ್ರಕರಣಗಳನ್ನು ದಾಖಲಿಸಿಕೊಂಡಿದ್ದಾರೆ.

ಬಳಿಕ ಸ್ಥಳೀಯವಾಗಿ ಸಾರ್ವಜನಿಕರ ಸಭೆ ನಡೆಸಿ ಕಾನೂನು ಅರಿವು ಕಾರ್ಯಕ್ರಮದ ಬಗ್ಗೆ ಜಾಗೃತಿ ಮೂಡಿಸಿದ
ಸುಳ್ಯ ವೃತ್ತ ನಿರೀಕ್ಷಕ ರವೀಂದ್ರ ಮತ್ತು ಉಪ ನಿರೀಕ್ಷಕ ದಿಲೀಪ್ ರವರು ಕಾನೂನು ಅರಿವು ಮಾಹಿತಿ ನೀಡಿ ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದು ಸಾರ್ವಜನಿಕರು ಯಾವುದೇ ರೀತಿಯ ಸಮಾಜಘಾತುಕ ಚಟುವಟಿಕೆಗಳಲ್ಲಿ ತೊಡಗಿಕೊಳ್ಳದಂತೆ,ಸಮಾಜದಲ್ಲಿ ಅಶಾಂತಿ ಉಂಟು ಮಾಡುವ ಸಂದೇಶಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಾಕದಂತೆ ಎಚ್ಚರಿಕೆ ವಹಿಸಿಕೊಳ್ಳಬೇಕೆಂದು ಹೇಳಿದರು.ಅಲ್ಲದೆ ನೀವುಗಳು ವಾಸಿಸುವ ಪ್ರದೇಶದಲ್ಲಿ ಯಾರೇ ವ್ಯಕ್ತಿಯಾಗಲಿ ಕಾನೂನು ಬಾಹಿರ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದರೆ,ಅಮಲು ಪದಾರ್ಥಗಳನ್ನು ಸೇವಿಸಿ ಸಾರ್ವಜನಿಕರಿಗೆ ತೊಂದರೆ ನೀಡುವುದು ಮುಂತಾದ ವಿಷಯಗಳು ಗಮನಕ್ಕೆ ಬಂದರೆ ಕೂಡಲೇ ಪೊಲೀಸ್ ಠಾಣೆಗೆ ಮಾಹಿತಿ ನೀಡುವಂತೆ ಕೇಳಿಕೊಂಡರು. ನೈತಿಕ ಪೊಲೀಸ್ ಗಿರಿಯನ್ನು ಯಾರೂ ಕೂಡ ಮಾಡಬಾರದು ಅಂಥವರ ಮೇಲೆ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆಗಳನ್ನು ನೀಡಿದರು.
ಶಾಂತಿಯುತ ಸಮಾಜ ನಿರ್ಮಾಣಕ್ಕೆ ಪ್ರತಿಯೊಬ್ಬ ಸಾರ್ವಜನಿಕರು ಪೊಲೀಸ್ ಇಲಾಖೆಯೊಂದಿಗೆ ಸಹಕರಿಸುವಂತೆ ಕೇಳಿಕೊಂಡರು.ಸಭೆಯಲ್ಲಿ ಸ್ಥಳೀಯ ಉದ್ಯಮಿಗಳು, ಆಟೋ ಚಾಲಕರು, ಸಾರ್ವಜನಿಕರು ಭಾಗವಹಿಸಿದ್ದರು.