ಸೈಂಟ್ ಜೋಸೆಫ್ ಪ್ರೌಢಶಾಲಾ ಪೋಷಕರ ಸಭೆ

0


ಸುಳ್ಯದ ಸೈಂಟ್ ಜೋಸೆಫ್ ಪ್ರೌಢಶಾಲೆಯ ಪೋಷಕರ ಸಭೆಯು ಫೆಬ್ರವರಿ 21 ರಂದು ನಡೆಯಿತು. ಸಭಾಧ್ಯಕ್ಷತೆಯನ್ನು ವಿದ್ಯಾಸಂಸ್ಥೆಯ ಸಂಚಾಲಕರಾದ ರೆ. ಫಾ. ವಿಕ್ಟರ್ ಡಿ ಸೋಜ ವಹಿಸಿ , ಶಾಲೆಯ ಪ್ರಗತಿಯ ಬಗ್ಗೆ ವಿವರಣೆ ನೀಡಿ , ವಿದ್ಯಾರ್ಥಿಗಳ ಸರ್ವಾಂಗೀಣ ಬೆಳವಣಿಗೆಗೆ ಶಿಕ್ಷಕರ ಹಾಗೂ ಪೋಷಕರ ಜವಾಬ್ದಾರಿಗಳ ಬಗ್ಗೆ ಮಾತನಾಡಿದರು. ವಾರ್ಷಿಕ ವರದಿಯನ್ನು ಪ್ರೌಢ ಶಾಲಾ ಶಿಕ್ಷಕರ ಕಾರ್ಯದರ್ಶಿ ಸಹ ಶಿಕ್ಷಕಿ ಚೇತನ ವಾಚಿಸಿದರು.

ಶಾಲೆಯ ನೀತಿ ನಿಯಮಾವಳಿಗಳ ಹಾಗೂ ವಾರ್ಷಿಕ ಪರೀಕ್ಷೆಯ ಪೂರ್ವ ತಯಾರಿಯ ಬಗ್ಗೆ ಸಹ ಶಿಕ್ಷಕಿ ಉಷಾದೇವಿ ಪೋಷಕರಿಗೆ ತಿಳಿಸಿದರು. ವೇದಿಕೆಯಲ್ಲಿ ಸೈಂಟ್ ಬ್ರಿಜಿಡ್ ಚರ್ಚ್ ಪಾಲನ ಮಂಡಳಿಯ ಉಪಾಧ್ಯಕ್ಷರಾದ ಶ್ರೀ ನವೀನ್ ಮಚಾದೋ, ಉಪಸ್ಥಿತರಿದ್ದು ಸಂದರ್ಭೋಚಿತವಾಗಿ ಮಾತನಾಡಿದರು. ಮುಖ್ಯೋಪಾಧ್ಯಾಯಿನಿ ಸಿಸ್ಟರ್ ಬಿನೋಮಾ ಸ್ವಾಗತಿಸಿ, ಸಹ ಶಿಕ್ಷಕಿ ಜ್ಯೋತಿ ಜೆ ರೈ ವಂದಿಸಿದರು. ಸಹ ಶಿಕ್ಷಕಿ ದೇವಿಲತಾ ಕಾರ್ಯಕ್ರಮ ನಿರೂಪಿಸಿದರು.