ಸಂಪಾಜೆ ವಲಯ ಕಾಂಗ್ರೆಸ್ ಸಮಿತಿಯ ಮುಖಂಡರುಗಳ ಹಾಗೂ ಕಾರ್ಯಕರ್ತರ ಸಭೆ

0


ಮುಂಬರುವ ರಾಜ್ಯ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಪಕ್ಷ ಸಂಘಟನೆ, ಕಾಂಗ್ರೆಸ್ ಪಕ್ಷದ ವತಿಯಿಂದ ಘೋಷಿಸಲಾಗಿರುವ ಯೋಜನೆಗಳ ಬಗ್ಗೆ ಜನಸಾಮಾನ್ಯರಿಗೆ ಮಾಹಿತಿಯನ್ನು ತಲುಪಿಸುವ ಬಗ್ಗೆ ಹಾಗೂ ಬೂತ್ ಸಮಿತಿಗಳನ್ನು ರಚಿಸುವ ಬಗ್ಗೆ ಚರ್ಚಿಸಲು ಸುಳ್ಯ ಬ್ಲಾಕ್ ಕಾಂಗ್ರೆಸ್ ಸಮಿತಿಯ ವತಿಯಿಂದ ಸಂಪಾಜೆ ವಲಯ ಕಾಂಗ್ರೆಸ್ ಸಮಿತಿಯ ಮುಖಂಡರುಗಳ ಹಾಗೂ ಕಾರ್ಯಕರ್ತರ ಸಭೆಯು ಕಲ್ಲುಗುಂಡಿಯ ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದ ಸಭಾಭವನದಲ್ಲಿ ಜರುಗಿತು.

ಸುಳ್ಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಪಿ.ಸಿ.ಜಯರಾಮ, ಸಂಪಾಜೆ ವಲಯ ಕಾಂಗ್ರೆಸ್ ಅಧ್ಯಕ್ಷರಾದ ಸೋಮಶೇಖರ್ ಕೊಯಿಂಗಾಜೆ, ಕೆ.ಪಿ.ಸಿ.ಸಿ.ಸಂಯೋಜಕರುಗಳಾದ ಎಚ್.ಎಂ.ನಂದಕುಮಾರ್, ಜಿ.ಕೃಷ್ಣಪ್ಪ, ಜಿಲ್ಲಾ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿ ಮಹಮ್ಮದ್ ಕುಂಞ ಗೂನಡ್ಕರವರು ಸಭೆಯನ್ನು ಉದ್ದೇಶಿಸಿ ಮಾತನಾಡಿದರು.

ಸಂಪಾಜೆ ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಲಿಸ್ಸಿ ಮೊನಾಲಿಸಾ, ಕೆ.ಪಿ.ಸಿ.ಸಿ.ವಕ್ತಾರ ಶೌವಾದ್ ಗೂನಡ್ಕ, ಸುಳ್ಯ ತಾಲೂಕು ಓSUI ಸಮಿತಿಯ ಅಧ್ಯಕ್ಷರಾದ ಕೀರ್ತನ್ ಕೊಡಪಾಲ, ಸುಳ್ಯ ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಕೋಶಾಧಿಕಾರಿ ತಾಜ್ ಮಹಮ್ಮದ್, ದ.ಕ.ಜಿಲ್ಲಾ ಕಾಂಗ್ರೆಸ್ ಅಸಂಘಟಿತ ಕಾರ್ಮಿಕ ಘಟಕದ ಪ್ರಧಾನ ಕಾರ್ಯದರ್ಶಿ ಜ್ಞಾನಶೀಲನ್ (ರಾಜು) ನೆಲ್ಲಿಕುಮೇರಿ, ಸಂಪಾಜೆ ವಲಯ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷರಾದ ಕೆ.ಎಂ.ಅಶ್ರಫ್, ಸಂಪಾಜೆ ಗ್ರಾಮ ಪಂಚಾಯತ್ ಸದಸ್ಯರುಗಳಾದ ವಿಮಲಾ ಪ್ರಸಾದ್, ಸುಶೀಲಾ ನಾಯ್ಕ್, ಸಂಪಾಜೆ ಸೊಸೈಟಿ ನಿರ್ದೇಶಕರಾದ ಎಚ್.ಎ.ಹಮೀದ್, ಸಂಪಾಜೆ ಗ್ರಾಮ ಪಂಚಾಯತ್ ಮಾಜಿ ಸದಸ್ಯರಾದ ಬೆಂಜಮೀನ್ ಡಿ’ಸೋಜಾ, ಸುಳ್ಯ ಬ್ಲಾಕ್ ಯುವ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿ ರುಡಾಲ್ಫ್ ಕ್ರಾಸ್ತಾ, ಸುಳ್ಯ ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಕಾರ್ಯದರ್ಶಿ ಡಿ.ಆರ್.ಖಾದರ್ ಸೇರಿದಂತೆ ಪ್ರಮುಖ ಕಾಂಗ್ರೆಸ್ ಕಾರ್ಯಕರ್ತರು ಸಭೆಯಲ್ಲಿ ಉಪಸ್ಥಿತರಿದ್ದರು.

ಸಂಪಾಜೆ ವಲಯ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿ ಟಿ.ಐ.ಲೂಕಾಸ್ ಸಭೆಯನ್ನು ನಿರೂಪಿಸಿದರು.