ವಿನೋಬನಗರ: ವಿವೇಕಾನಂದ ವಿದ್ಯಾಸಂಸ್ಥೆಯಲ್ಲಿ ಸಾಮಾಜಿಕ ನ್ಯಾಯ ದಿನಾಚರಣೆ

0

ಸುಳ್ಯ ತಾಲೂಕು ಕಾನೂನು ಸೇವೆಗಳ ಸಮಿತಿ – ವಕೀಲರ ಸಂಘ – ವಿವೇಕಾನಂದ ವಿದ್ಯಾಸಂಸ್ಥೆ ಹಾಗೂ ಸುದ್ದಿ ಮಾಧ್ಯಮ ಸಹಕಾರ

ಸುಳ್ಯ ತಾಲೂಕು ಕಾನೂನು ಸೇವೆಗಳ ಸಮಿತಿ, ವಕೀಲರ ಸಂಘ ಹಾಗೂ ಸುದ್ದಿ ಮಾಧ್ಯಮ ಮತ್ತು ವಿನೋಬನಗರ ವಿವೇಕಾನಂದ ವಿದ್ಯಾಸಂಸ್ಥೆಯ ಸಹಯೋಗದಲ್ಲಿ ಸಾಮಾಜಿಕ ನ್ಯಾಯ ದಿನಾಚರಣೆ ಕಾರ್ಯಕ್ರಮವು ಜಾಲ್ಸೂರು ಗ್ರಾಮದ ವಿನೋಬನಗರದ ವಿವೇಕಾನಂದ ವಿದ್ಯಾಸಂಸ್ಥೆಯಲ್ಲಿ ಫೆ.27ರಂದು ನಡೆಯಿತು.
ಕಾರ್ಯಕ್ರಮವನ್ನು ಸಿವಿಲ್ ನ್ಯಾಯಾಧೀಶರಾದ ಶಿವಣ್ಣ.ಹೆಚ್.ಆರ್ ಅವರು ಉದ್ಘಾಟಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು.

ವಿವೇಕಾನಂದ ವಿದ್ಯಾಸಂಸ್ಥೆಯ ಸಂಚಾಲಕ ಕೆ.ಸುಧಾಕರ ಕಾಮತ್ ವಿನೋಬನಗರ ಅವರು ಅಧ್ಯಕ್ಷತೆ ವಹಿಸಿದ್ದರು.
ಸಾಮಾಜಿಕ ನ್ಯಾಯ ವಿಷಯದ ಕುರಿತು ಸಂಪನ್ಮೂಲ ವ್ಯಕ್ತಿ ಹರೀಶ್ ಬಿ. ಅವರು ಮಾಹಿತಿ ನೀಡಿದರು.


ಮುಖ್ಯ ಅತಿಥಿಗಳಾಗಿ ವಕೀಲರ ಸಂಘದ ಅಧ್ಯಕ್ಷ ನಾರಾಯಣ.ಕೆ.,
ಸಹಾಯಕ ಸರ್ಕಾರಿ ಅಭಿಯೋಜಕರು ಆರೋನ್ ಡಿ.ಸೋಜ, ವಿವೇಕಾನಂದ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಮುಖ್ಯೋಪಾಧ್ಯಾಯ ಗಿರೀಶ್ ಕುಮಾರ್. ಎ., ವಿದ್ಯಾಸಂಸ್ಥೆಯ ಆಡಳಿತಾಧಿಕಾರಿ ಗೋಪಾಲ್ ರಾವ್, ಪ್ಯಾನಲ್ ವಕೀಲರಾದ
ಜಗದೀಶ್.ಡಿ.ಪಿ. ಉಪಸ್ಥಿತರಿದ್ದರು.