ಪೆರುವಾಜೆ : ಅಕ್ರಮ ಮದ್ಯ ಮಾರಾಟ – ಪ್ರಕರಣ ದಾಖಲು

0

ಪೆರುವಾಜೆ ಗ್ರಾಮದ ಬೊಟ್ಟತ್ತಾರು ಎಂಬಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದವರ ಮೇಲೆ ಬೆಳ್ಳಾರೆ ಠಾಣೆಯಲ್ಲಿ ಪ್ರಕರಣ ದಾಖಲಾದ ಘಟನೆ ಫೆ.28 ರಂದು ನಡೆದಿದೆ.
ಮುರ್ಕೆತ್ತಿ ಬಳಿಯ ಬೊಟ್ಟತ್ತಾರು ಎಂಬಲ್ಲಿ ವ್ಯಕ್ತಿಯೋರ್ವರು ಅಕ್ರಮವಾಗಿ ಮದ್ಯ ಮರಾಟ ಮಾಡುತ್ತಿದ್ದಾರೆ ಎಂಬ ಮಾಹಿತಿ ಬಂದ ಹಿನ್ನೆಲೆಯಲ್ಲಿ ಧಾಳಿ ನಡೆಸಿದ ಬೆಳ್ಳಾರೆ ಪೊಲೀಸರು ಮಾರಾಟದಲ್ಲಿ ತೊಡಗಿಸಿಕೊಂಡಿದ್ದ ಆರೋಪಿ ಅಣ್ಣು ಎಂಬವರು ಪೊಲೀಸರನ್ನು ನೋಡಿ ಅಂಗಡಿಯೊಂದರ ಹಿಂಬದಿಯಲ್ಲಿ ಪ್ಲಾಸ್ಟಿಕ್ ಬ್ಯಾಗೊಂದನ್ನು ಬಿಸಾಡಿ ಓಡಿ ಪರಾರಿಯಾದರೆನ್ನಲಾಗಿದೆ.
ಪ್ಲಾಸ್ಟಿಕ್ ಚೀಲವನ್ನು ಪರಿಶೀಲಿಸಿದಾಗ ಮೈಸೂರು ಲ್ಯಾನ್ಸರ್ ವಿಸ್ಕಿ,13 ಟೆಟ್ರಾ ಪ್ಯಾಕೆಟ್ ಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಈ ಬಗ್ಗೆ ಬೆಳ್ಳಾರೆ ಠಾಣೆಯಲ್ಲಿ ಅಬಕಾರಿ ಕಾಯ್ದೆಯಂತೆ ಪ್ರಕರಣ ದಾಖಲಾಗಿರುವುದಾಗಿ ತಿಳಿದು ಬಂದಿದೆ.