ಸ್ನೇಹ ಶಿಕ್ಷಣ ಸಂಸ್ಥೆಯಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ

0

ಸುಳ್ಯದ ಸ್ನೇಹ ಶಿಕ್ಷಣ ಸಂಸ್ಥೆಯಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಕಾರ್ಯಕ್ರಮವು ಫೇ. 28. ರಂದು ಜರಗಿತು.


ಕಾರ್ಯಕ್ರಮದಲ್ಲಿ ಶಾಲಾ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಜಯಲಕ್ಷ್ಮಿ ದಾಮ್ಲೆ ಮಾತನಾಡಿ ” ಪ್ರತಿಯೊಬ್ಬನಿಗೂ ಪರಿಸರದಲ್ಲಿನ ಆಗುಹೋಗುಗಳ ಬಗ್ಗೆ ಕುತೂಹಲ ಮತ್ತು ಆಸಕ್ತಿ ಇದ್ದಲ್ಲಿ ವೈಜ್ಞಾನಿಕ ಮನೋಭಾವನೆಯನ್ನು ಬೆಳೆಸಿಕೊಳ್ಳಲು ಸಹಕಾರಿಯಾಗುವುದು. ವಿಜ್ಞಾನ ದಿನಾಚರಣೆ ಕೇವಲ ಒಂದು ದಿನಕ್ಕೆ ಸೀಮಿತವಾಗದೆ ನಮ್ಮ ದಿನನಿತ್ಯದ ಜೀವನದಲ್ಲಿ ಅನುಭವಕ್ಕೆ ಸಿಗುವ ವಿಷಯಗಳ ಕಾರಣಗಳನ್ನು ತಿಳಿದುಕೊಳ್ಳುವುದರ ಮೂಲಕ ಅನ್ವೇಷಣಾ ಮನೋಭಾವನೆಯನ್ನು ಬೆಳೆಸಿಕೊಳ್ಳಬಹುದು” ಎಂದು ಹೇಳಿದರು. ಕಾರ್ಯಕ್ರಮದಲ್ಲಿ ಶಾಲಾ ಶಿಕ್ಷಕಿ ಶ್ರೀಮತಿ ಅಮೃತಾ ಮಾತನಾಡಿ ” ಸರ್ ಸಿ ವಿ ರಾಮನ್ ರವರ ಸಂಶೋಧನೆ ಮತ್ತು ವೈಜ್ಞಾನಿಕ ಕೊಡುಗೆಗಳನ್ನು ಆಧರಿಸಿ ಇಂದು ರಾಷ್ಟ್ರೀಯ ವಿಜ್ಞಾನ ದಿನವನ್ನು ಆಚರಿಸುತ್ತಿದ್ದೇವೆ. ಸರ್ ಸಿ ವಿ ರಾಮನ್ ರವರ ಸಂಶೋಧನೆ ಅನೇಕ ಹೊಸ ಸಂಶೋಧನೆಗಳಿಗೆ ನಾಂದಿ ಹಾಡಿದೆ. ಹೊಸ ಸಂಶೋಧನೆಗಳ ಮೂಲಕ ವಿಜ್ಞಾನ ಕ್ಷೇತ್ರಕ್ಕೆ ಕೊಡುಗೆ ನೀಡಬೇಕು” ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಶಾಲಾ ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಉಪಸ್ಥಿತರಿದ್ದರು.
ಶಿಕ್ಷಕಿ ಶ್ರೀಮತಿ ಪ್ರತಿಮಕುಮಾರಿ ನಿರ್ವಹಿಸಿದರು.