ಪುತ್ತೂರು ವಿಧಾನಸಭಾ ಕ್ಣೇತ್ರದಲ್ಲಿ ಒಕ್ಕಲಿಗ ಗೌಡ ಸಮುದಾಯಕ್ಕೆ ಅವಕಾಶ ನೀಡುವಂತೆ ಆಗ್ರಹಿಸಿ ಗೌಡ ಸಮಾಜದ ಕಾಂಗ್ರೆಸ್ ಮುಖಂಡರ ನಿಯೋಗ ಡಿಕೆಶಿ ಭೇಟಿ

0

ವಿಧಾನಸಭಾ ಚುನಾವಣೆಯಲ್ಲಿ ಪುತ್ತೂರು ಕ್ಷೇತ್ರಕ್ಕೆ ಒಕ್ಕಲಿಗ ಗೌಡ ಸಮುದಾಯದ ಅಭ್ಯರ್ಥಿಗೆ ಅವಕಾಶ ನೀಡಬೇಕೆಂದು ಸುಳ್ಯ ಮತ್ತು ಪುತ್ತೂರು ಒಕ್ಕಲಿಗ ಗೌಡ ಸಮಾಜದ ಕಾಂಗ್ರೆಸ್ ಮುಖಂಡರ ನಿಯೋಗ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿ ಮಾಡಿ ಬೇಡಿಕೆಯನ್ನು ಮುಂದಿಟ್ಟಿದ್ದಾರೆ. ಕಳೆದ 50 ವರ್ಷಗಳಿಂದ ಈ ಭಾಗದ ಒಕ್ಕಲಿಗ ಸಮಾಜಕ್ಕೆ ಸೂಕ್ತ ಸ್ಥಾನಮಾನ ಪಕ್ಷದಲ್ಲಿ ಸಿಕ್ಕಿಲ್ಲ. ಒಕ್ಕಲಿಗ ಗೌಡ ಸಮುದಾಯಕ್ಕೆ ಅವಕಾಶ ನೀಡದ ಕಾರಣ ಈ ಭಾಗದಲ್ಲಿ ಕಾಂಗ್ರೆಸ್‌ಗೆ ಹಿನ್ನಡೆಯಾಗಿದೆ. ಈ ಮಧ್ಯೆ ಬಿಜೆಪಿಯಲ್ಲಿ ಹಲವು ಮುಖಂಡರಿಗೆ ಅವಕಾಶ ನೀಡಲಾಗುತಿದೆ. 3.5ಲಕ್ಷ ಮತದಾರರು ಒಕ್ಕಲಿಗರಿದ್ದು, ಲೋಕಸಭಾ ಚುನಾವಣೆಯಲ್ಲೂ ಅವಕಾಶ ನೀಡಬೇಕು ಎಂದು ಮನವಿ
ಮಾಡಲಾಗಿತ್ತು. ಸುಳ್ಯ ಹಾಗು ಪುತ್ತೂರಿನಲ್ಲಿಯೂ ಒಕ್ಕಲಿಗ ಗೌಡ ಸಮುದಾಯದ ಬಹು ಸಂಖ್ಯಾತ ಮತದಾರರಿದ್ದಾರೆ. ಹಾಗಾಗಿ ಈ ಭಾರಿ ಪುತ್ತೂರು ಕ್ಷೇತ್ರದಲ್ಲಿ ಒಕ್ಕಲಿಗ ಗೌಡ ಸಮುದಾಯಕ್ಕೆ ಅವಕಾಶ ನೀಡುವಂತೆ ಡಿ.ಕೆ.ಶಿವಕುಮಾರ್ ಅವರಲ್ಲಿ ಬೇಡಿಕೆ ಮುಂದಿರಿಸಲಾಯಿತು ಎಂದು ತಿಳಿದು ಬಂದಿದೆ.
ನಿಯೋಗದಲ್ಲಿ ದ.ಕ ಗೌಡ ವಿದ್ಯಾ ಸಂಘದ ಅಧ್ಯಕ್ಷ ಹಾಗು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಧನಂಜಯ ಅಡ್ಪಂಗಾಯ, ಸುಳ್ಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಿ.ಸಿ ಜಯರಾಮ, ಕೆಪಿಸಿಸಿ ಮಾಜಿ ಕಾರ್ಯದರ್ಶಿ ಎಂ. ವೆಂಕಪ್ಪ ಗೌಡ, ಬ್ಲಾಕ್ ಕಾಂಗ್ರೆಸ್ ಮಹಿಳಾ ಅಧ್ಯಕ್ಷೆ ಗೀತಾ ಕೊಲ್ಚಾರ್, ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪಿ.ಎಸ್.ಗಂಗಾಧರ, ತೇಜಕುಮಾರ್ ಬಡ್ಡಡ್ಕ, ಸದಾನಂದ‌ ಮಾವಜಿ, ತೀರ್ಥರಾಮ ಜಾಲ್ಸೂರು, ಶಶಿಧರ ಎಂ.ಜೆ, ಕೀರ್ತನ್ ಕೊಡಪಾಲ ಲೀಲಾ ಮನಮೋಹನ, ಸುಜಯಾ ಕೃಷ್ಣ, ತಿರುಮಲೇಶ್ವರಿ ಅರ್ಭಡ್ಕ ಮತ್ತಿತರರು ಉಪಸ್ಥಿತರಿದ್ದರು ಎಂದು ತಿಳಿದು ಬಂದಿದೆ.