ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಜಾದಿ ಕಾ ಅಮೃತ ಮಹೋತ್ಸವ ಕಾರ್ಯಕ್ರಮ

0

ಸುಳ್ಯದ ವೃತ ನಿರೀಕ್ಷಕ ಹಾಗೂ ಸುಳ್ಯ ಪೊಲೀಸ್ ಠಾಣಾ ಉಪನಿರೀಕ್ಷರಿಗೆ ಪದಕ ಪ್ರದಾನ

ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಜಿಲ್ಲಾ ಪೊಲೀಸ್ ಕವಾಯತು ಮೈದಾನದಲ್ಲಿ 75 ನೇ ಆಜಾದಿ ಕ ಅಮೃತ ಮಹೋತ್ಸವ ಕಾರ್ಯಕ್ರಮದ ನಿಮಿತ್ತ ಪದಕ ಪ್ರಧಾನ ಕಾರ್ಯಕ್ರಮವನ್ನು ಮಾರ್ಚ್ 3 ರಂದು ಹಮ್ಮಿಕೊಳ್ಳಲಾಗಿತ್ತು.

ಈ ಸಂದರ್ಭದಲ್ಲಿ ಸುಳ್ಯದ ವೃತ್ತ ನಿರೀಕ್ಷಕ ಸಿ ಎಂ ರವೀಂದ್ರ, ಸುಳ್ಯ ಪೊಲೀಸ್ ಠಾಣಾ ಉಪನಿರೀಕ್ಷಕ ದಿಲೀಪ್, ರವರಿಗೆ ಪದಕ ಮತ್ತು ಪ್ರಶಸ್ತಿ ಪತ್ರ ಹಾಗೂ ಸುಳ್ಯ ಪೊಲೀಸ್ ಠಾಣೆಯ ಹಿರಿಯ ಹೆಡ್ ಕಾನ್ಸ್ಟೇಬಲ್ ಉಮೇಶ್ ಇವರಿಗೆ ಸೇವಾ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು.
ವಿಶೇಷ ಆಹ್ವಾನಿತರಾದ ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಮಟ್ಟಾರ ವಿಠ್ಠಲ ಕಿಣಿ ರವರು ಪೊಲೀಸ್ ಅಧಿಕಾರಿಗಳಿಗೆ ಹಾಗೂ ಸಿಬ್ಬಂದಿಗಳಿಗೆ ಸಾಂಕೇತಿಕವಾಗಿ ಪದಕ ಪ್ರಧಾನ ಮಾಡಿದರು.

ಈ ಸಂದರ್ಭದಲ್ಲಿ ಫೆಬ್ರವರಿ ತಿಂಗಳಲ್ಲಿ ಅತ್ಯುತ್ತಮವಾಗಿ ಕರ್ತವ್ಯ ನಿರ್ವಹಿಸಿದ ಅಧಿಕಾರಿ, ಸಿಬ್ಬಂದಿಗಳಿಗೆ ಪ್ರಶಂಸನಾ ಪತ್ರ ಹಾಗೂ ನಗದು ಬಹುಮಾನವನ್ನು ನೀಡಿ ಪ್ರೋತ್ಸಾಹಿಸಲಾಯಿತು.