ಮುಂದುವರಿದ ಆರೋಗ್ಯ ಇಲಾಖೆಯ ಒಳಗುತ್ತಿಗೆ ನೌಕರರ ಪ್ರತಿಭಟನೆ : ಸರ್ಕಾರಿ ಆಸ್ಪತ್ರೆಯಲ್ಲಿ ಸೇವಾ ವ್ಯತ್ಯಯ

0

ಕರ್ನಾಟಕ ರಾಜ್ಯ ಅರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಒಳಗುತ್ತಿಗೆ ನೌಕರರ ಸಂಘ ಯನ್.ಎಚ್.ಯಂ. ಒಳಗುತ್ತಿಗೆ ನೌಕರರನ್ನು ಕಾಯಂ ಮಾಡುವಂತೆ ಒತ್ತಾಯಿಸಿ ಫೆ. 13ರಿಂದ ಬೆಂಗಳೂರು ಫ್ರೀಡಂ ಪಾರ್ಕಿನಲ್ಲಿ ನಡೆಯುತ್ತಿರುವ ಮುಷ್ಕರ ಮುಂದುವರೆಯುತ್ತಿದ್ದು, ಸುಳ್ಯ ತಾಲೂಕಿನ ಅರೋಗ್ಯ ಇಲಾಖೆಯ ಯನ್.ಎಚ್.ಯಂ ಸಿಬ್ಬಂದಿಗಳು ಕೂಡ ಕರ್ತವ್ಯಕ್ಕೆ ಗೈರು ಹಾಜರಾಗಿ ಮುಷ್ಕರ ನಡೆಸುತ್ತಿದ್ದಾರೆ.


ಸುಳ್ಯ ಸರ್ಕಾರಿ ಆಸ್ಪತ್ರೆಯ ಹನ್ನೆರಡು ಮಂದಿ ಸ್ಟಾಫ್ ನರ್ಸುಗಳು, ಮೂರು ಮಂದಿ ಲ್ಯಾಬ್ ಟೆಕ್ನಿಷಿಯನ್, ಓರ್ವ ಕೌನ್ಸಿಲರ್ ಸೇರಿದಂತೆ ಒಟ್ಟು 16 ಮಂದಿ ಪ್ರತಿಭಟನೆಗೆ ತೆರಳಿದ್ದಾರೆ.
ಇದರಿಂದಾಗಿ ಸುಳ್ಯ ಸರ್ಕಾರಿ ಆಸ್ಪತ್ರೆಯ ಹೆರಿಗೆ ವಾರ್ಡ್, ಬಾಣಂತಿಯರ ವಾರ್ಡ್, ಮಕ್ಕಳಚುಚ್ಚುಮದ್ದು ಕೇಂದ್ರ, ರಕ್ತ ಪರೀಕ್ಷಾ ಕೇಂದ್ರ ಈ ವಿಭಾಗದ ಕೆಲಸ ಕಾರ್ಯಗಳು ಸ್ಥಗಿತಗೊಂಡು ರೋಗಿಗಳು ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ.