ಕೆ.ವಿ.ಜಿ. ಇಂಜಿನಿಯರಿಂಗ್ ಕಾಲೇಜಿನಲ್ಲಿ ಎಂ.ಬಿ.ಎ. ವಿದ್ಯಾರ್ಥಿ ಸಂಘದ ಪದಾಧಿಕಾರಿಗಳ ಪದಗ್ರಹಣ ಮತ್ತು ಪ್ರೆಶರ್‍ಸ್ ಡೇ ಆಚರಣೆ

0

ಕೆ.ವಿ.ಜಿ ತಾಂತ್ರಿಕ ಮಹಾವಿದ್ಯಾಲಯದ ಎಂ.ಬಿ.ಎ ವಿಭಾಗದ ವಿದ್ಯಾರ್ಥಿ ಸಂಘದ ಉದ್ಘಾಟನಾ ಸಮಾರಂಭ ಸ್ವಾಗತ ಕಾರ್ಯಕ್ರಮ ಪ್ರಾರಂಭವು ಮಾ -೦೩ ರಂದು ಕಾಲೇಜಿನ ಸಭಾಂಗಣದಲ್ಲಿ ಜರುಗಿತು.
ಮುಖ್ಯ ಅತಿಥಿಗಳಾಗಿ ಉಪಸ್ಥಿತರಿದ್ದ ಸುಳ್ಯ ವರ್ತಕರ ಸಂಘದ ಅಧ್ಯಕ್ಷ, ರೆಡ್ ಕ್ರಾಸ್ ಸೊಸೈಟಿ ಅಧ್ಯಕ್ಷ ಸುಧಾಕರ ರೈ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ವಿದ್ಯಾರ್ಥಿಗಳು ತಮ್ಮ ಸಾಮರ್ಥ್ಯವನ್ನು ಅರಿತು ಅಸಾಧ್ಯವಾದುದನ್ನು ಸಾಧ್ಯವಾಗಿಸುವಲ್ಲಿ ಅಮೂಲ್ಯ ಸಮಯವನ್ನು ಧಾರೆಯೆರೆದು, ಜ್ಞಾನಾ ದೀಪದ ಶಾಂತಿ ಪಸರಿಸಿದಂತೆ ವಿದ್ಯಾರ್ಥಿ ಜೀವನವನ್ನು ಧನ್ಯರಾಗಿಸಿಕೊಳ್ಳುವದರ ಜೊತೆಗೆ ಗುರು ಹಿರಿಯರಿಗೆ ಹಾಗೂ ಕಾಲೇಜಿಗೆ ಗೌರವ ತರುವಂತಹ ಉನ್ನತ ವಟ್ಟಕ್ಕೆ ಬೆಳೆಯಬೇಕು ಎಂದು ಶುಭ ಹಾರೈಸಿದರು. ಕಾರ್ಯಕ್ರಮದಲ್ಲಿ ಕಾಲೇಜಿನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮತ್ತು ಕಂಪ್ಯೂಟರ್ ಸೈನ್ಸ್ & ಇಂಜಿನಿಯರಿಂಗ್ ವಿಭಾಗದ ಮುಖ್ಯಸ್ಥರಾದ ಡಾ. ಉಜ್ವಲ್ ಯು.ಜೆ.ಯವರು ಮಾತನಾಡಿ, ರಾಷ್ಟ್ರೀಯ ನೂತನ ಶಿಕ್ಷಣ ನೀತಿಯ ಪ್ರಕಾರ ಸ್ನಾತಕೋತ್ತರ ಪಠ್ಯಕ್ರಮಗಳು ಬದಲಾಗುವುದ ಜೊತೆಗೆ ಕಲಿಕೆಯೊಂದಿಗೆ ಕೌಶಲಾಭಿವೃದ್ಧಿ ಎಂಬ ನೂತನ ಪ್ರೇಯದೊಂದಿಗೆ, ಈ ನೀತಿಯು ವಿದ್ಯಾರ್ಥಿಗಳ ಬೆಳವಣಿಗೆಗೆ ಸಹಕಾರಿಯಾಗಲಿದೆ” ಎಂದು ಹೇಳಿ ಪ್ರಥಮ ವರ್ಷದ ಎಂ.ಬಿ.ಎ ವಿದ್ಯಾರ್ಥಿಗಳಿಗೆ ಶುಭಹಾರೈಸಿದರು. ಸಮಾರಂಭದ ಅಧ್ಯಕ್ಷತೆಯನ್ನು ಪ್ರಾಂಶುಪಾಲರಾದ ಡಾ. ಸುರೇಶ ವಿ. ಯವರು ವಹಿಸಿದ್ದು, ಕಾರ್ಯಕ್ರಮಕ್ಕೆ ಯಶಸ್ಸನ್ನು ಹಾರೈಸಿದರು. ಎಂ.ಬಿ.ಎ. ವಿಭಾಗದ ಮುಖ್ಯಸ್ಥರಾದ ಪ್ರೊ. ಕೃಷ್ಣಾನಂದ ಹೊಸ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು. ಮುಖ್ಯ ಅತಿಥಿಗಳಾದ ಸುಧಾಕರ ರೈಯವರನ್ನು ಈ ಸಂದರ್ಭದಲ್ಲಿ ಸನ್ಮಾನಿಸಲಾಯಿತು, ಮಾನಸ ವಿದ್ಯಾರ್ಥಿ ಸಂಘದ ಉಪಾಧ್ಯಕ್ಷೆ ಅಧಿರಾ ಸ್ವಾಗತಿಸಿ, ಕಾರ್ಯದರ್ಶಿ ಧನ್ಯ ಕೆ.ಜಿ. ವಾರ್ಷಿಕ ವರದಿಯನ್ನು ವಾಚಿಸಿದರು. ಜತೆಕಾರ್ಯದರ್ಶಿ ಕೀರ್ತಿ ವಂದಿಸಿದರು. ಸಂಯೋಜಕರಾದ ಪ್ರೊ. ಮನೋಹರ ಎ.ಎಸ್ ಹಾಗೂ ವಿಭಾಗದ ಎಲ್ಲಾ ಉಪನ್ಯಾಸಕರು ಹಾಗು ಸಿಬ್ಬಂಧಿ ವರ್ಗದವರು ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ಅಂತಿಮ ವರ್ಷದ ವಿದ್ಯಾರ್ಥಿಗಳಾದ ದೀಕ್ಷಿತಾ ಯಾದವ್ ಮತ್ತು ಫಾತಿಮಾತ್ ಇಷ್ಟಾನ ನಿರೂಪಿಸಿದರು. ಸಭಾ ಕಾರ್ಯಕ್ರಮದ ಬಳಿಕ ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಿತು.