ಸಂಪಾಜೆಯಲ್ಲಿ ಮೂಲಭೂತ ಸೌಕರ್ಯಗಳ ಹಿತರಕ್ಷಣಾ ವೇದಿಕೆ ಅಸ್ತಿತ್ವಕ್ಕೆ

0

ಗೌರವ ಸಂಚಾಲಕರಾಗಿ ಸೋಮಶೇಖರ್ ಕೊಯಿಂಗಾಜೆ

ದ.ಕ.ಸಂಪಾಜೆ ಗ್ರಾಮದಲ್ಲಿನ ಸಾರ್ವಜನಿಕ ಸಮಸ್ಯೆಗಳ ಬಗ್ಗೆ ಸಮರ್ಪಕ ರೀತಿಯಲ್ಲಿ ಹೋರಾಡುವ ನಿಟ್ಟಿನಲ್ಲಿ ಮೂಲಭೂತ ಸೌಕರ್ಯಗಳ ಹಿತರಕ್ಷಣಾ ವೇದಿಕೆ ಅಸ್ತಿತ್ವಕ್ಕೆ ಬಂದಿದ್ದು, ಗ್ರಾಮದ ಹಿರಿಯ ಸಹಕಾರಿ, ರಾಜಕೀಯ ಹಾಗೂ ಧಾರ್ಮಿಕ ಧುರೀಣರಾದ ಸೋಮಶೇಖರ್ ಕೊಯಿಂಗಾಜೆಯವರು ಇದರ ಗೌರವ ಸಂಚಾಲಕರಾಗಿ ಕಾರ್ಯನಿರ್ವಹಿಸಲಿದ್ದಾರೆ.

ಗ್ರಾಮದಲ್ಲಿನ ಹಲವು ಮೂಲಭೂತ ಸೌಕರ್ಯಗಳ ಬಗ್ಗೆ ಮೇಲ್ಮಟ್ಟದಲ್ಲಿ ಸಮರ್ಪಕ ರೀತಿಯಲ್ಲಿ ಸ್ಪಂದನೆಗಳು ಸಿಗುತ್ತಿಲ್ಲ, ಈ ಕಾರಣಕ್ಕಾಗಿ ಮುಂದಿನ ದಿನಗಳಲ್ಲಿ ಸಾರ್ವಜನಿಕರನ್ನೆಲ್ಲ ಒಗ್ಗೂಡಿಸಿ ಪರಿಹಾರಕ್ಕಾಗಿ ಹೋರಾಡುವ ನಿಟ್ಟಿನಲ್ಲಿ ಈ ಸಂಘಟನೆಯು ಕಾರ್ಯಪ್ರವೃತವಾಗಲಿದೆ.