ಮಾ.19 ರಂದು ಸುಳ್ಯ ತಾಲೂಕಿನಲ್ಲಿ ಬಿಜೆಪಿ ಜಿಲ್ಲಾ ಮಹಿಳಾ ಸಮಾವೇಶ

0

15 ಸಾವಿರ ಮಂದಿ ಭಾಗಿ : ಸಾಧಕ ಮಹಿಳೆಯವರಿಗೆ ಸುಷ್ಮಾ ಸ್ವರಾಜ್ ಅವಾರ್ಡ್

ಜಿಲ್ಲಾ ಬಿಜೆಪಿ ನೇತೃತ್ವದಲ್ಲಿ ಜಿಲ್ಲಾ ಮಟ್ಟದ ಬಿಜೆಪಿ ಮಹಿಳಾ ಸಮಾವೇಶ ಮಾ.೧೯ರಂದು ಸುಳ್ಯ ತಾಲೂಕಿನಲ್ಲಿ ನಡೆಸಲು ನಿರ್ಧರಿಸಿರುವುದಾಗಿ ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾ ಅಧ್ಯಕ್ಷೆ ಶ್ರೀಮತಿ ಧನಲಕ್ಷ್ಮೀ ಗಟ್ಟಿ ಹೇಳಿದರು.
ಮಾ.೯ರಂದು ಸುಳ್ಯ ಪ್ರೆಸ್ ಕ್ಲಬ್‌ನಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಅವರು, “ಜಿಲ್ಲೆಯಲ್ಲಿ ಪಕ್ಷ ಸಂಘಟನಾತ್ಮಕವಾಗಿ ದುಡಿಯುತ್ತಿದೆ. ಮುಂಬರುವ ವಿಧಾನ ಸಭಾ ಚುನಾವಣೆಗೆ ಈಗಾಗಲೇ ಪ್ರತೀ ಕ್ಷೇತ್ರದಲ್ಲಿ ಕೆಲಸ ಕಾರ್ಯಗಳು ನಡೆಯುತ್ತಿದೆ. ಈ ನಿಟ್ಟಿನಲ್ಲಿ ಜಿಲ್ಲಾ ಮಟ್ಟದ ಮಹಿಳಾ ಸಮಾವೇಶವನ್ನು ನಡೆಸಲು ನಿರ್ಧರಿಸಿದ್ದು ಸುಳ್ಯ ತಾಲೂಕಿನಲ್ಲಿ ಈ ಬಾರಿ ಆಯೋಜನೆ ಮಾಡಲಾಗಿದೆ ಎಂದವರು ಹೇಳಿದರು.
ಸಮಾವೇಶದಲ್ಲಿ ಜಿಲ್ಲೆಯ ವಿವಿಧ ತಾಲೂಕಿಗಳಿಂದ ಸೇರಿ ಒಟ್ಟು ಸುಮಾರು ೧೫ ಸಾವಿರ ತಾಯಂದಿರುವ ಭಾಗವಹಿಸಲಿದ್ದಾರೆ. ಮತ್ತು ಸಾಧಕ ಮಹಿಳೆಯರಿಗೆ ಸುಷ್ಮಾ ಸ್ವರಾಜ್ ಅವಾರ್ಡ್ ನೀಡಿ ಗೌರವಿಸಲಾಗುವುದು. ಮುಖ್ಯವಾಗಿ ಆತ್ಮ ನಿರ್ಭರ ಭಾರತ್ ಯೋಜನೆಯ ಪ್ರಯೋಜನ ಪಡೆದುಕೊಂಡ ತಾಯಂದಿರು ತಯಾರಿಸಿರುವ ವಸ್ತುಗಳ ಪ್ರದರ್ಶನ ಮತ್ತು ಮಾರಾಟಕ್ಕೂ ಸಮಾವೇಶದಲ್ಲಿ ಅವಕಾಶ ಕಲ್ಪಿಸಲಾಗುವುದು. ಸಮಾವೇಶವನ್ನು ಹಬ್ಬವಾಗಿ ಆಚರಿಸಲಾಗುವುದು ಎಂದವರು ಹೇಳಿದರು.
ಮುಂಬರುವ ಚುನಾವಣೆಯಲ್ಲಿ ಜಿಲ್ಲೆಯಲ್ಲಿ ಮಹಿಳೆಯರಿಗೂ ಟಿಕೆಟ್ ಕೊಡುತ್ತಾರೆಂಬ ನಿರೀಕ್ಷೆ ನಮ್ಮಲ್ಲಿದೆ. ಯಾವ ಕ್ಷೇತ್ರದಲ್ಲಿ ಯಾರಿಗೆ ಟಿಕೆಟ್ ಸಿಕ್ಕಿದರೂ ಪಕ್ಷದ ಗೆಲುವಿಗಾಗಿ ನಾವೆಲ್ಲ ಶ್ರಮಿಸುತ್ತೇವೆ ಎಂದು ಧನಲಕ್ಷ್ಮೀ ಗಟ್ಟಿ ಹೇಳಿದರು.
ಪತ್ರಿಕಾಗೋಷ್ಠಿಯಲ್ಲಿ ಸಚಿವ ಎಸ್.ಅಂಗಾರ, ಬಿಜೆಪಿ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ತ್ರಿವೇಣಿ, ಸಂಚಾಲಕಿ ಪೂಜಾ ಪೈ, ಕಾರ್ಯದರ್ಶಿ ಜಯಂತಿ, ಉಪಾಧ್ಯಕ್ಷೆ ಪುಷ್ಪಾ ಬಾಳಿಲ, ರಾಜ್ಯ ಸಮಿತಿ ಸದಸ್ಯೆ ಭಾಗೀರಥಿ ಮುರುಳ್ಯ, ಪ್ರಮುಖರಾದ ಈಶ್ವರ ಕಟೀಲು, ಹರೀಶ್ ಕಂಜಿಪಿಲಿ, ಎ.ವಿ. ತೀರ್ಥರಾಮ, ವಿನಯ ಕುಮಾರ್ ಕಂದಡ್ಕ, ಸುಭೋದ್ ಶೆಟ್ಟಿ ಮೇನಾಲ, ರಾಕೇಶ್ ರೈ ಕೆಡೆಂಜಿ, ವೆಂಕಟ್ ದಂಬೆಕೋಡಿ, ವೆಂಕಟ್ ವಳಲಂಬೆ, ಗುರುದತ್ ಜಿ ನಾಯಕ್, ಸುನಿಲ್ ಕೇರ್ಪಳ ಮೊದಲಾದವರಿದ್ದರು.