ಮಾ.13 : ಬೆಳ್ಳಾರೆ ಪೊಲೀಸ್ ಠಾಣಾ ನೂತನ ಕಟ್ಟಡ ಉದ್ಘಾಟನೆ

0

ದ.ಕ.ಜಿಲ್ಲಾ ಪೊಲೀಸ್ ಘಟಕ ಬೆಳ್ಳಾರೆ ಪೊಲೀಸ್ ಠಾಣಾ ನೂತನ ಕಟ್ಟಡ ಉದ್ಘಾಟನಾ ಸಮಾರಂಭವು ಮಾ.13 ರಂದು ನಡೆಯಲಿದೆ.
ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ನೂತನ ಕಟ್ಟಡವನ್ನು ಉದ್ಘಾಟಿಸಲಿದ್ದಾರೆ.
ಗೌರವ ಉಪಸ್ಥಿತರಾಗಿ ಇಂಧನ ಮತ್ತು ಕನ್ನಡ ಸಂಸ್ಕೃತಿ ಇಲಾಖೆ ಸಚಿವ,ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸುನಿಲ್ ಕುಮಾರ್, ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ಉಪಸ್ಥಿತರಿರುವರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮೀನುಗಾರಿಕೆ,ಬಂದರು ಹಾಗೂ ಒಳನಾಡು ಜಲಸಾರಿಗೆ ಸಚಿವ ಎಸ್.ಅಂಗಾರ ವಹಿಸಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಲೋಕಸಭಾ ಸದಸ್ಯ ನಳಿನ್ ಕುಮಾರ್ ಕಟೀಲ್ ,ರಾಜ್ಯ ಸಭಾ ಸದಸ್ಯರಾದ ಡಾ.ಡಿ.ವೀರೇಂದ್ರ ಹೆಗ್ಗಡೆ ಹಾಗೂ ಹಲವು ಜನ ಗಣ್ಯರು ಭಾಗವಹಿಸಲಿದ್ದಾರೆ.