ಕೆ.ವಿ.ಜಿ. ಪಾಲಿಟೆಕ್ನಿಕ್ : ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ

0

ಕುರುಂಜಿ ವೆಂಕಟ್ರಮಣ ಗೌಡ ಪಾಲಿಟೆಕ್ನಿಕ್ ನ ರಾಷ್ಟ್ರೀಯ ಸೇವಾ ಯೋಜನೆ, ಯುವ ರೆಡ್ ಕ್ರಾಸ್ ಘಟಕ ಹಾಗೂ ಮಹಿಳಾ ಸಬಲೀಕರಣ ಕೋಶಗಳ ಸಂಯುಕ್ತ ಆಶ್ರಯದಲ್ಲಿ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮವು ಕಾಲೇಜಿನ ಸಭಾಂಗಣದಲ್ಲಿ ನಡೆಯಿತು.
ಕಾರ್ಯಕ್ರಮವನ್ನು ಕಾಲೇಜಿನ ಪ್ರಾಂಶುಪಾಲ ಜಯಪ್ರಕಾಶ ಕೆ ಉದ್ಘಾಟಿಸಿ ಮಹಿಳಾ ದಿನಾಚರಣೆಯ ಮಹತ್ವದ ಬಗ್ಗೆ ಮಾತನಾಡಿದರು.

ಗ್ರಂಥಪಾಲಕಿ ಕವಿತಾ ಪಿ.ಡಿ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಮಹಿಳಾ ಸಬಲೀಕರಣ ಕೋಶದ ಅಧ್ಯಕ್ಷೆ ಬಿಂದು ಕೆ.ವಿ, ಅಧೀಕ್ಷಕರುಗಳಾದ ಧನಂಜಯ ಕಲ್ಲುಗದ್ದೆ, ಶಿವರಾಮ ಕೇರ್ಪಳ, ವೇದಿಕೆಯಲ್ಲಿ ಉಪಸ್ಥಿತರಿದ್ದು ಶುಭ ಹಾರೈಸಿದರು. ಎನ್ನೆಸ್ಸೆಸ್ ಕಾರ್ಯಕ್ರಮಾಧಿಕಾರಿ ಚಂದ್ರಶೇಖರ ಬಿಳಿನೆಲೆ ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು. ವಿದ್ಯಾರ್ಥಿ ಕ್ಷೇಮಾಧಿಕಾರಿ ಸುನಿಲ್ ಕುಮಾರ್ ಎನ್.ಪಿ. ವಂದಿಸಿದರು. ಶಿಕ್ಷಕ ನಾರಾಯಣ ತೋರಣಗಂಡಿ ನಿರೂಪಿಸಿದರು.


ಸಭಾ ಕಾರ್ಯಕ್ರಮದ ಬಳಿಕ ಮಹಿಳೆಯರಿಗೆ ವಿವಿಧ ಸ್ಪರ್ಧೆಗಳನ್ನು ನಡೆಸಿ ಬಹುಮಾನ ವಿತರಿಸಲಾಯಿತು.