ಸುಬ್ರಹ್ಮಣ್ಯ: ಬಸ್ ಓವರ್ ಟೇಕ್

0

ಬೈಕ್ ಸ್ಕಿಡ್ ಆಗಿ ಓರ್ವ ಯುವಕ ಮೃತ್ಯು, ಮತ್ತೋರ್ವನಿಗೆ ಗಾಯ

ಕೇರಳ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಮಲಬಾರ್ ಬಸ್ ನ್ನು ಓವರ್ ಟೇಕ್ ಮಾಡಿ ಮುಂದೆ ಹೋಗುತಿದ್ದಾಗ ಬೈಕ್ ಸ್ಕಿಡ್ ಆಗಿ ಬಿದ್ದ ಪರಿಣಾಮ ಓರ್ವ ಮೃತಪಟ್ಟು, ಮತ್ತೋರ್ವ ಗಾಯಗೊಂಡ ಘಟನೆ ಮಾ.10 ರಾತ್ರಿ ಸುಬ್ರಹ್ಮಣ್ಯ ಇಂಜಾಡಿ ಬಳಿ ನಡೆದಿದೆ.

ಮೃತ ವ್ಯಕ್ತಿಯನ್ನು ಸುಬ್ರಹ್ಮಣ್ಯದ ಕಲ್ಲಗುಡ್ಡೆ ನಿವಾಸಿ ರಮೇಶ್ ಎಂದು ತಿಳಿದು ಬಂದಿದೆ.
ಘಟನೆಯಲ್ಲಿ ಗಂಭೀರ ಗಾಯಗೊಂಡ ರಮೇಶ್ ಆಸ್ಪತ್ರೆಗೆ ಸಾಗಿಸುವ ಹಾದಿ ಮಧ್ಯೆ ಮೃತಪಟ್ಟಿರುವುದಾಗಿ ತಿಳಿದುಬಂದಿದೆ. ಅವರಿಗೆ 27 ವರ್ಷ ವಯಸ್ಸಾಗಿತ್ತು. ಮತ್ತೊಬ್ಬ ಗಾಯಾಳು ಸಣ್ಣ ಪುಟ್ಟ ಗಾಯದಿಂದ ಪಾರಾಗಿರುವುದಾಗಿ ತಿಳಿದು ಬಂದಿದೆ.