ಜಾಲ್ಸೂರು : ಕಲ್ಲುಮುರ ನಿವಾಸಿಗಳಿಂದ ಮತದಾನ ಬಹಿಷ್ಕಾರ ಬ್ಯಾನರ್ ಅಳವಡಿಕೆ

0

ಜಾಲ್ಸೂರು ಗ್ರಾಮದ ಕಲ್ಲುಮುರ ಕಾಲೋನಿ ನಿವಾಸಿಗಳಿಗೆ ಇನ್ನೂ ಹಕ್ಕುಪತ್ರ ದೊರೆಯದ ಕಾರಣ ಮುಂಬರುವ ರಾಜ್ಯ ವಿಧಾನಸಭಾ ಚುನಾವಣೆಯನ್ನು ಬಹಿಷ್ಕಾರ ಮಾಡುವುದಾಗಿ ಬ್ಯಾನರ್ ಅಳವಡಿಸಿದ್ದಾರೆ.

ಇತ್ತೀಚಿಗೆ ಜಾಲ್ಸೂರಿನಲ್ಲಿ ನಡೆದ ಗ್ರಾಮ ವಾಸ್ತವ್ಯ ಕಾರ್ಯಕ್ರಮದಲ್ಲಿ ಈ ಬಗ್ಗೆ ನಿವಾಸಿಗಳು ಮನವಿ ಸಲ್ಲಿಸಿದ್ದರೂ ಇನ್ನೂ ಹಕ್ಕುಪತ್ರ ದೊರೆಯದ ಹಿನ್ನೆಲೆಯಲ್ಲಿ ಕಲ್ಲುಮುರದ ೧೩ ಕುಟುಂಬಗಳು ಮತದಾನ ಬಹಿಷ್ಕಾರ ಮಾಡಲು ನಿರ್ಧರಿಸಿದ್ದೇವೆ ಎಂದು ಅಲ್ಲಿನ ನಿವಾಸಿಗಳು ತಿಳಿಸಿದ್ದಾರೆ.