ಆಲೆಟ್ಟಿ ಗುಂಡ್ಯ ಜನನಿ ಫ್ರೆಂಡ್ಸ್ ಕ್ಲಬ್ ಇದರ ದಶ ಸಂಭ್ರಮದ ಕ್ರಿಕೆಟ್ ಪಂದ್ಯಾಟದ ಉದ್ಘಾಟನೆ

0

ಆಲೆಟ್ಟಿ ಗ್ರಾಮದ ಗುಂಡ್ಯ ಜನನಿ ಫ್ರೆಂಡ್ಸ್ ಕ್ಲಬ್ ಇದರ ದಶ ಸಂಭ್ರಮದ ಪ್ರಯುಕ್ತ ನಾರ್ಕೋಡು ಶಾಲೆಯ ಮೈದಾನದಲ್ಲಿ ಮಾ.12 ರಂದು ಕ್ರಿಕೆಟ್ ಪಂದ್ಯಾಟದ ಉದ್ಘಾಟನಾ ಸಮಾರಂಭ ನೆರವೇರಿತು.
ಜನನಿ ಕ್ಲಬ್ಬಿನ ಅಧ್ಯಕ್ಷ ಲತೀಶ್ ಗುಂಡ್ಯ ಅಧ್ಯಕ್ಷತೆ ವಹಿಸಿದ್ದರು. ಆಲೆಟ್ಟಿ ಸೊಸೈಟಿ ಸಿಬ್ಬಂದಿ ವೆಂಕಟ್ರಮಣ ದೀಪ ಬೆಳಗಿಸಿದರು.

ಮುಖ್ಯ ಅತಿಥಿಗಳಾಗಿ ಬಾರ್ಪಣೆ ವಿಕ್ರಮ ಯುವಕ ಮಂಡಲದ ಅಧ್ಯಕ್ಷ ಪ್ರಶಾಂತ್ ಕೋಲ್ಚಾರು, ಗ್ರಾಮ ಪಂಚಾಯತ್ ಸಿಬ್ಬಂದಿ ಸೀತಾರಾಮ ಮೊರಂಗಲ್ಲು, ಆದರ್ಶ ಕ್ರೀಡಾ ಮತ್ತು ಸಾಂಸ್ಕೃತಿಕ ಸಂಘದ ಅಧ್ಯಕ್ಷ ಶ್ರೀಜಿತ್ ಪೆರುಮುಂಡ,ಕೂರ್ನಡ್ಕ ಪ್ರಗತಿ ಯುವಕ ಮಂಡಲದ ಅಧ್ಯಕ್ಷ ಪವಿತ್ರ ಕುಮಾರ್,ಕುಡೆಂಬಿ ಶ್ರೀ ವಿಷ್ಣು ಯುವಕ ಮಂಡಲದ ಅಧ್ಯಕ್ಷ ಲಿಖಿನ್ ಕುಡೆಂಬಿ ಹಾಗೂ ಜನನಿ ಫ್ರೆಂಡ್ಸ್ ಕ್ಲಬ್ ನ ಪದಾಧಿಕಾರಿಗಳು, ಕ್ರೀಡಾಪಟುಗಳು,ಕ್ರೀಡಾಭಿಮಾನಿಗಳು ಉಪಸ್ಥಿತರಿದ್ದರು.