ಸಂಪಾಜೆ : ಕಡಪಾಲದಲ್ಲಿ ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ

0


ಸಂಪಾಜೆ ಗ್ರಾಮದ ಕಡೆಪಾಲ ಎಂಬಲ್ಲಿ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಇಂದು ಮಧ್ಯಾಹ್ನ ಸಂಭವಿಸಿದೆ.
ಕಡಪಾಲದ ಕೊರಗರವರ ಪುತ್ರ ರಾಜು ಆತ್ಮಹತ್ಯೆ ಮಾಡಿಕೊಂಡಿರುವ ವ್ಯಕ್ತಿ. ಅವರಿಗೆ 45 ವರ್ಷ ವಯಸ್ಸಾಗಿತ್ತು.

ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ಕಲ್ಲುಗುಂಡಿ ಹೊರಠಾಣಾ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ.