ರಾಹುಲ್ ಗಾಂಧಿಯವರೊಂದಿಗೆ ಭಾರತ್ ಜೋಡೋ ಯಾತ್ರೆಯಲ್ಲಿ ಪೂರ್ಣವಾಗಿ ಭಾಗವಹಿಸಿದ ಕಮಲ್‌ಜಿತ್

0


ಸುಳ್ಯ ವಿಧಾನ ಸಭಾ ಕ್ಷೇತ್ರದ ಎಐಸಿಸಿ ಚುನಾವಣಾ ವೀಕ್ಷಕ

ಎಐಸಿಸಿ ಮಾಜಿ ಅಧ್ಯಕ್ಷ ಹಾಗೂ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರೊಂದಿಗೆ ಇತ್ತೀಚೆಗೆ ಭಾರತ್ ಜೋಡೋ ಯಾತ್ರೆಯಲ್ಲಿ ಪೂರ್ಣವಾಗಿ ಭಾಗವಹಿಸಿದ್ದ 209 ಜನರಲ್ಲಿ ಒಬ್ಬರಾಗಿದ್ದ ರಾಷ್ಟ್ರೀಯ ಯುವ ಕಾಂಗ್ರೆಸ್ ಸಂಯೋಜಕ ಕಮಲ್ ಜಿತ್ ಸುಳ್ಯ ವಿಧಾನ ಸಭಾ ಕ್ಷೇತ್ರದ ಎಐಸಿಸಿ ಚುನಾವಣಾ ವೀಕ್ಷಕರಾಗಿ ನೇಮಕಗೊಂಡಿದ್ದು, ತನ್ನ ಕರ್ತವ್ಯ ಆರಂಭಿಸಿದ್ದಾರೆ.


ಕನ್ಯಾಕುಮಾರಿ ಯಿಂದ ಕಾಶ್ಮೀರದವರೆಗೆ ನಡೆದ ಭಾರತ್ ಜೋಡೋ ಯಾತ್ರೆಯಲ್ಲಿ ಕೇರಳದ ಕಣ್ಣೂರು ಮೂಲದ ಕಮಲ್ ಜಿತ್ ಪೂರ್ಣವಾಗಿ ಭಾಗವಹಿಸಿ ರಾಹುಲ್ ಗಾಂಧಿಯ ಧಿಯ ಮೆಚ್ಚುಗೆಗೆ ಪಾತ್ರರಾಗಿದ್ದರು. ಇದೀಗ ಪಕ್ಷದ ವತಿಯಿಂದ ಸುಳ್ಯ ವಿಧಾನಸಭಾ ಕ್ಷೇತ್ರದ ಚುನಾವಣಾ ವೀಕ್ಷಕರಾಗಿ ನೇಮಕ ಗೊಂಡಿದ್ದಾರೆ. ಕಮಲ್‌ಜಿತ್ ಅವರು ಸುಳ್ಯ ವಿಧಾನಸಭಾ ಕ್ಷೇತ್ರದ ಚುನಾವಣಾ ಕಾರ್ಯದಲ್ಲಿ ತೊಡಗಿಸಿಕೊಳ್ಳಲು ವಿಧಾನಸಭಾ ಚುನಾವಣಾ ಕಾರ್ಯದಲ್ಲಿ ತೊಡಗಿಸಿಕೊಳ್ಳಲು ಸುಳ್ಯಕ್ಕೆ ಆಗಮಿಸಿದ್ದು, ಈಗಾಗಲೇ ಪಕ್ಷದ ಚಟುವಟಿಕೆಗಳಳಲ್ಲಿ ಭಾಗವಹಿಸುತ್ತಿದ್ದಾರೆ. ಇಲ್ಲಿನ ಪಕ್ಷದ ಚುನಾವಣಾ ಪ್ರಚಾರದ ಉಸ್ತುವಾರಿ ವಹಿಸಿ ಎಐಸಿಸಿಗೆ ವರದಿ ಮಾಡಲಿದ್ದಾರೆ ಎಂದು ತಿಳಿದು ಬಂದಿದೆ.