ಬಳ್ಪ: ಬೀದಿಗುಡ್ಡೆ ಮೂಲಕ ಸರಕಾರಿ ಬಸ್ ಸಂಚಾರಕ್ಕೆ ಚಾಲನೆ

0

ಬಳ್ಪ ಗ್ರಾಮದ ಅಡ್ಡಬೈಲು – ಬೀದಿಗುಡ್ಡೆ – ಪಟೋಳಿ – ಬೋಗಾಯನಕೆರೆ ಮಾರ್ಗವಾಗಿ ಕೆ.ಎಸ್.ಆರ್.ಟಿ.ಸಿ. ಬಸ್ ಸಂಚಾರಕ್ಕೆ ಮಾ.13 ರಂದು ಚಾಲನೆ ನೀಡಲಾಯಿತು.
ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವ ಎಸ್.ಅಂಗಾರ ಅವರು ಬಸ್ ಸೇವೆಗೆ ಚಾಲನೆ ನೀಡಿದರು.

ಬಳಿಕ ಮಾತನಾಡಿದ ಅವರು ಹಿಂದುಳಿದಿದ್ದ ಬಳ್ಪ ಇಂದು ಹಲವು ರೀತಿಯಲ್ಲಿ ಅಭಿವೃದ್ಧಿ ಹೊಂದುತ್ತಿದೆ. ಬಹುಬೇಡಿಕೆಯ ರಸ್ತೆ ಸಂಪರ್ಕ ವ್ಯವಸ್ಥೆ ಅಭಿವೃದ್ಧಿ ಗೊಂಡಿದ್ದು, ಸಾರ್ವಜನಿಕರಿಗೆ ಹಾಗೂ ಶಾಲಾ ಮಕ್ಕಳಿಗೆ ಸಂಚರಿಸಲು ಸರಕಾರಿ ಬಸ್ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ ಎಂದರು.


ಬಳ್ಪ ಗ್ರಾಮ ಪಂಚಾಯತ್ ಅಧ್ಯಕ್ಷೆ ಶಶಿಕಲಾ, ಸುಳ್ಯ ಬಿಜೆಪಿ ಮಂಡಲ ಸಮಿತಿ ಅಧ್ಯಕ್ಷ ಹರೀಶ್ ಕಂಜಿಪಿಲಿ, ಪ್ರಮುಖರಾದ ವೆಂಕಟ್ ವಳಲಂಬೆ, ಮುಳಿಯ ಕೇಶವ ಭಟ್ ಸೇರಿದಂತೆ ಚುನಾಯಿತ ಪ್ರತಿನಿಧಿಗಳು, ಗ್ರಾಮಸ್ಥರು, ಫಲಾನುಭವಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here