ನಾಳೆ ಕರಿಕ್ಕಳದಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಸಭೆ – ಗ್ಯಾರಂಟಿ ಕಾರ್ಡ್ ಬಿಡುಗಡೆ

0

ಸುಳ್ಯ ಬ್ಲಾಕ್ ಕಾಂಗ್ರೆಸಿನ ಅಧ್ಯಕ್ಷರಾದ ಪಿ ಸಿ ಜಯರಾಮ ಗೌಡ ಇವರ ಅಧ್ಯಕ್ಷತೆಯಲ್ಲಿ ಪಂಜ ತಾಲೂಕು ಪಂಚಾಯಿತಿ ವ್ಯಾಪ್ತಿಯ ಐವತ್ತೊಕ್ಲು, ಕೂತ್ಕುಂಜ, ಕಲ್ಮಡ್ಕ, ಪಂಬೆತ್ತಾಡಿ ಗ್ರಾಮಗಳ ಕಾಂಗ್ರೆಸ್ ಕಾರ್ಯಕರ್ತರ ಸಭೆಯನ್ನು ಕಲ್ಮಡ್ಕ ಗ್ರಾಮ ಪಂಚಾಯತಿನ ಉಪಾಧ್ಯಕ್ಷರಾದ ಮಹೇಶ್ ಕುಮಾರ್ ಕರಿಕ್ಕಳ ಇವರ ಮನೆಯ ಸಭಾಂಗಣದಲ್ಲಿ ಮಾ.18 ರಂದು ಕರೆಯಲಾಗಿದೆ. ಕಾಂಗ್ರೆಸ್ ಪಕ್ಷದ ವತಿಯಿಂದ ಹೊರತರಲಾಗಿರುವ ಗ್ಯಾರಂಟಿ ಕಾರ್ಡ್ ಬಿಡುಗಡೆ ಕಾರ್ಯ ಈ ಸಂದರ್ಭ ನಡೆಯಲಿದೆ ಎಂದು ತಿಳಿಸಲಾಗಿದೆ. ಪಕ್ಷದ ನಾಯಕರು ಮತ್ತು ಎಲ್ಲಾ ಕಾರ್ಯಕರ್ತರು ಈ ಸಭೆಯಲ್ಲಿ ಭಾಗವಹಿಸಿ ಸೂಕ್ತ ಸಲಹೆ ಸೂಚನೆಗಳನ್ನು ಕೊಟ್ಟು, ಸಹಕರಿಸಬೇಕೆಂದು ಪಂಜ ತಾಲೂಕ್ ಪಂಚಾಯತ್ ಕ್ಷೇತ್ರದ ಉಸ್ತುವಾರಿಯಾಗಿರುವ ಮಹೇಶ್ ಕುಮಾರ್ ಕರಿಕ್ಕಳ ತಿಳಿಸಿದ್ದಾರೆ.