ಪಂಜ : ರೈತರೊಂದಿಗೆ ಸಂವಾದ ಕಾರ್ಯಕ್ರಮ

0

ಕರ್ನಾಟಕ ಪಶುವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಬೀದರ ಭಾ. ಕೃ. ಅ.ಪ- ಕೃಷಿ ವಿಜ್ಞಾನ ಕೇಂದ್ರ ಮಂಗಳೂರು, ತೆಂಗು ಅಭಿವೃದ್ದಿ ಮಂಡಳಿ, ಬೆಂಗಳೂರು ಪ್ರಾಯೋಜಿತ ಪರಿವಾರ ಪಂಜ ರೈತ ಉತ್ಪಾದಕ ಕಂಪನಿ ಲಿಮಿಟೆಡ್ ಪಂಜ ಇದರ ಸಹಭಾಗಿತ್ವದಲ್ಲಿ ರೈತರೊಂದಿಗೆ ಸಂವಾದ ಕಾರ್ಯಕ್ರಮ ಮಾ.16ರಂದು ಪಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಭಾಭವನದಲ್ಲಿ ನಡೆಯಿತು.


ಕಾರ್ಯಕ್ರಮವನ್ನು ಒಳನಾಡು ಮೀನು ಸಾಕಣೆ ಹಾಗೂ ಪ್ರಗತಿಪರ ಕೃಷಿಕ ಶ್ರೀಕೃಷ್ಣ ಭಟ್ ಪಟೋಳಿ ಉದ್ಘಾಟಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪರಿವಾರ ಪಂಜ ರೈತ ಉತ್ಪಾದಕ ಕಂಪನಿ ಲಿಮಿಟೆಡ್ ಪಂಜ ಇದರ ಅಧ್ಯಕ್ಷರ ತೀರ್ಥಾನಂದ ಕೊಡೆಂಕಿರಿ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಪಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಗಣೇಶ್ ಪೈ ಹಾಗೂ ಪ್ರಭಾರ ಹಿರಿಯ ಸಹಾಯಕ ತೋಟಗಾರಿಕಾ ನಿರ್ದೇಶಕರಾದ ಶ್ರೀಮತಿ ಸುಹನಾ ಪಿ ಕೆ.ಭಾಗಹಿಸಿದ್ದರು. ಕಾರ್ಯಕ್ರಮದಲ್ಲಿ ತೋಟಗಾರಿಕಾ ಬೆಳೆಗಳ ಸುಧಾರಿತ ಬೇಸಾಯ ಕ್ರಮಗಳು ಹಾಗೂ ಸಮಗ್ರ ಕೀಟ ನಿರ್ವಹಣೆ ಬಗ್ಗೆ ಕೃಷಿ ವಿಜ್ಞಾನ ಕೇಂದ್ರ ಮಂಗಳೂರು ಇಲ್ಲಿಯ ವಿಜ್ಞಾನಿಗಳಾದ ಡಾ. ರಶ್ಮಿ ಆರ್, ಹಾಗೂ ಡಾ. ಕೇದಾರನಾಥ ಮತ್ತು ಒಳನಾಡು ಮೀನುಗಾರಿಕೆ ವಿಷಯದಲ್ಲಿ ಡಾ.ಚೇತನ್ ಎನ್ ಸಂಪನ್ಮೂಲ ವ್ಯಕ್ತಿಗಳಾಗಿ ಮಾಹಿತಿ ಹಾಗೂ ಸಂವಾದ ನಡೆಸಿದರು. ಕಾರ್ಯಕ್ರಮದಲ್ಲಿ ರೈತ ಉತ್ಪಾದಕ ಕಂಪನಿಯ ನಿರ್ದೇಶಕರುಗಳು, ಸದಸ್ಯರು ಮತ್ತು ರೈತರು ಪಾಲ್ಗೊಂಡಿದ್ದರು.


ಕಾರ್ಯಕ್ರಮದಲ್ಲಿ ಪರಿವಾರ ಪಂಜ ರೈತ ಉತ್ಪಾದಕ ಕಂಪನಿಯ ನಿರ್ದೇಶಕ ಕಾರ್ಯಪ್ಪ ಗೌಡ ಚಿದ್ಗಲ್ ಸ್ವಾಗತಿಸಿ ಉದಯಶಂಕರ್ ವಂದಿಸಿದರು,ಜೀವನ್ ಶೆಟ್ಟಿಗದ್ದೆ ಕಾರ್ಯಕ್ರಮ ನಿರೂಪಿಸಿದರು.