ಮಾದಕ ವಸ್ತು ಮಾರಾಟ ಮಾಡುತ್ತಿದ್ದ ವ್ಯಕ್ತಿಯ ಬಂಧನ

0


ಬೆಳ್ಳಂಬೆಳಗ್ಗೆ ಸುಳ್ಯ ಪೊಲೀಸರಿಂದ ನಡೆದ ಕಾರ್ಯಾಚರಣೆ

ಇಂದು ಬೆಳ್ಳಂಬೆಳಗ್ಗೆ ಸುಳ್ಯ ಪೊಲೀಸರು ಕ್ಷಿಪ್ರ ಕಾರ್ಯಚರಣೆ ನಡೆಸಿ ಮಾದಕ ವಸ್ತು ಮಾರಾಟ ಮಾಡುತ್ತಿದ್ದ ವ್ಯಕ್ತಿಯೊಬ್ಬನನ್ನು ಬಂಧಿಸಿರುವ ಘಟನೆ ವರದಿಯಾಗಿದೆ.

ಸುಳ್ಯದ ಕುರುಂಜಿಗುಡ್ಡೆ ಪರಿಸರದಲ್ಲಿ ಮಾದಕ ವಸ್ತು ಮಾರಾಟವಾಗುತ್ತಿರುವ ಖಚಿತ ಮಾಹಿತಿಯ ಮೇರೆಗೆ ಪೊಲೀಸ್ ಠಾಣಾ ಉಪನಿರೀಕ್ಷಕ ದಿಲೀಪ್ ರವರ ನೇತೃತ್ವದಲ್ಲಿ ಪೊಲೀಸರ ತಂಡ ದಿಢೀರ್ ದಾಳಿ ನಡೆಸಿ ಆರೋಪಿಯನ್ನು ಮಾಲು ಸಮೇತ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಳಿಕ ಆತನನ್ನು ಸುಳ್ಯ ಠಾಣೆಗೆ ಕರೆತಂದು ತನಿಖೆ ನಡೆಸಲಾಗುತ್ತಿದೆ ಎಂದು ತಿಳಿದುಬಂದಿದೆ. ಹೆಚ್ಚಿನ ಮಾಹಿತಿ ಇನ್ನು ತಿಳಿಯಬೇಕಾಗಿದೆ.

LEAVE A REPLY

Please enter your comment!
Please enter your name here