
ಪ್ರಧಾನಮಂತ್ರಿ ನರೇಂದ್ರ ಮೋದಿ ಯವರ ಮಾರ್ಗದರ್ಶನದಲ್ಲಿ ನಡೆಯಲಿರುವ ಮೀನುಗಾರರೊಂದಿಗಿನ ಸಂವಾದ ಕಾರ್ಯಾಗಾರಕ್ಕೆ ಆಗಮಿಸಿದ ಕೇಂದ್ರ ಮೀನುಗಾರಿಕೆ, ಪಶುಸಂಗೋಪನೆ ಮತ್ತು ಹೈನುಗಾರಿಕೆ ಸಚಿವರಾದ ಪರಷೋತ್ತಮ ರೂಪಾಲ ಅವರನ್ನು ಕಾರವಾರ ಬಂದರಿನಲ್ಲಿ ರಾಜ್ಯ ಮೀನುಗಾರಿಕಾ ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವರಾದ ಎಸ್. ಅಂಗಾರ ಅವರು ಸ್ವಾಗತಿಸಿ, ಬರಮಾಡಿಕೊಂಡರು.

ಮೀನುಗಾರರ ಸರ್ವತೋಮುಖ ಕಲ್ಯಾಣಕ್ಕಾಗಿ ಭಾರತ ಸರ್ಕಾರ ಮತ್ತು ಕರ್ನಾಟಕ ಸರ್ಕಾರದ ಸಹಯೋಗದೊಂದಿಗೆ ಮೀನುಗಾರರೊಂದಿಗೆ ಆಯೋಜಿಸಿದ ಸಂವಾದ ಕಾರ್ಯಕ್ರಮ “ಸಾಗರ ಪರಿಕ್ರಮ – (2023 ಹಂತ – 4)” ದಲ್ಲಿ ಭಾಗವಹಿಸಲು ಕರ್ನಾಟಕಕ್ಕೆ ಕೇಂದ್ರ ಸಚಿವರು ಆಗಮಿಸಿದ್ದು, ಕೇಂದ್ರ ಸಚಿವರೊಂದಿಗೆ ಕೇಂದ್ರ ಮೀನುಗಾರಿಕೆ, ಪಶುಸಂಗೋಪನೆ ಮತ್ತು ಹೈನುಗಾರಿಕೆ ರಾಜ್ಯ ಸಚಿವರಾದ ಡಾ.ಎಲ್ ಮುರುಗನ್, ಅವರನ್ನು ಕಾರವಾರ ಬಂದರಿನಲ್ಲಿ ಬರಮಾಡಿಕೊಂಡರು.
ಈ ಸಂದರ್ಭದಲ್ಲಿ ಕಾರವಾರ ಅಂಕೋಲ ಶಾಸಕಿ ಶ್ರೀಮತಿ ರೂಪಾಲಿ ಎಸ್ ನಾಯ್ಕ, ದ.ಕ.ಮತ್ತು ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್ ನಿ.ಮಂಗಳೂರು ಇದರ ಅಧ್ಯಕ್ಷ ಯಶಪಾಲ್ ಸುವರ್ಣ, ಹಾಗೂ ಕರ್ನಾಟಕ ಮೀನುಗಾರಿಕೆ ಇಲಾಖೆಯ ಸರ್ಕಾರದ ಕಾರ್ಯದರ್ಶಿ ಶ್ರೀಮತಿ ಸಲ್ಮಾ ಕೆ ಫಾಹಿಮ್, ನಿರ್ದೇಶಕರಾದ ರಾಮಾಚಾರ್ಯ, ಸೇರಿದಂತೆ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.
