ಬಾಳಿಲ: ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಸಮಾರಂಭ

0

ಬಾಳಿಲ ವಿದ್ಯಾ ಬೋಧಿನಿ ಪ್ರೌಢಶಾಲೆಯ 2022- 23ನೇ ಶೈಕ್ಷಣಿಕ ವರ್ಷದ 10ನೇ ತರಗತಿಯ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಸಮಾರಂಭ ಮಾ. 18ರಂದು ಜರುಗಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬಾಳಿಲ ವಿದ್ಯಾಬೋಧಿನಿ ಎಜುಕೇಶನಲ್ ಸೊಸೈಟಿಯ ಅಧ್ಯಕ್ಷ ಎನ್ ವೆಂಕಟರಮಣ ಭಟ್ ವಹಿಸಿ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.

ವೇದಿಕೆಯಲ್ಲಿ ಸಂಚಾಲಕರಾದ ಪಿ.ಜಿ.ಎಸ್.ಎನ್ ಪ್ರಸಾದ್, ಕೋಶಾಧಿಕಾರಿ ಯು ರಾಧಾಕೃಷ್ಣ ರಾವ್ ಉಪಸ್ಥಿತರಿದ್ದು ವಿದ್ಯಾರ್ಥಿಗಳಿಗೆ ಶುಭ ಕೋರಿದರು. 8 ಮತ್ತು 9ನೇ ತರಗತಿ ವಿದ್ಯಾರ್ಥಿಗಳು ಅನಿಸಿಕೆ ವ್ಯಕ್ತಪಡಿಸುವುದರೊಂದಿಗೆ ವಿದಾಯ ಗೀತೆ ಹಾಡಿದರು. 10ನೇ ತರಗತಿ ವಿದ್ಯಾರ್ಥಿಗಳು ಮೂರು ವರ್ಷದ ಅನುಭವವನ್ನು ವ್ಯಕ್ತಪಡಿಸಿದರು. ಇದೇ ಸಂದರ್ಭದಲ್ಲಿ 10ನೇ ತರಗತಿಯ ವಿದ್ಯಾರ್ಥಿಗಳು ನಗದು ರೂಪದ ಕೊಡುಗೆಯನ್ನು ನೀಡಿದರು.


ಮುಖ್ಯೋಪಾಧ್ಯಾಯರಾದ ಯಶೋಧರ ಎನ್ ಮತ್ತು ಎಲ್ಲಾ ಶಿಕ್ಷಕರು ವಿದ್ಯಾರ್ಥಿಗಳಿಗೆ ವಿವಿಧ ಘಟನೆಗಳ ಮೂಲಕ ಜೀವನ ಪಾಠದ ಬಗ್ಗೆ ತಿಳಿಸಿದರು.
ಪ್ರದೀಪ್ ಟಿ 9ನೇ ತರಗತಿ ಸ್ವಾಗತಿಸಿ, ತೃಪ್ತಿ ಬಿ 9ನೇ ತರಗತಿ ಇವರು ವಂದಿಸಿದರು. 9ನೇತರಗತಿಯ ಪ್ರತೀಕಾ ಮತ್ತು ಅನನ್ಯ ಬಿ ಕಾರ್ಯಕ್ರಮ ನಿರೂಪಿಸಿದರು.