ಪಂಜ ಗ್ರಾಮ ಪಂಚಾಯತ್ ನಲ್ಲಿ
ವಿವಿಧ ಸವಲತ್ತುಗಳ ವಿತರಣಾ ಸಮಾರಂಭ

0


ಪಂಜ ಗ್ರಾಮ ಪಂಚಾಯತ್ ನಲ್ಲಿ ಫಲಾನುಭವಿಗಳಿಗೆ ವಿವಿಧ ಸವಲತ್ತುಗಳ ವಿತರಣಾ ಸಮಾರಂಭ
ಮಾ. 17 ರಂದು ಪಂಜ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಜರುಗಿತು.
ಪಂಜ ಗ್ರಾಮ ಪಂಚಾಯತ್ ನ 2022-23ನೇ ಸಾಲಿನ ಸ್ವಂತ ನಿಧಿಯ ಶೇ.25, ಶೇ.5 ಮತ್ತು ಶೇ.2ರ ಅನುದಾನದಡಿ ಫಲಾನುಭವಿಗಳಿಗೆ ವಿವಿಧ ಸವಲತ್ತುಗಳ ವಿತರಣೆ ನಡೆಯಿತು.


ಕಾರ್ಯಕ್ರಮದ ಅಧ್ಯಕ್ಷತೆಯನ್ನು ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಪೂರ್ಣಿಮಾ ದೇರಾಜೆ ವಹಿಸಿದ್ದರು. ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಹರೀಶ್ ಕಂಜಿಪಿಲಿ, ಮಾಜಿ ಗ್ರಾಮ ಪಂಚಾಯತ್ ಅಧ್ಯಕ್ಷ ,ಹಿರಿಯ ವೈದ್ಯ ಡಾ. ರಾಮಯ್ಯ ಭಟ್, ಮಾಜಿ ತಾಲೂಕು ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಸುವರ್ಣಿನಿ ಎನ್ ಎಸ್, ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಶ್ರೀಮತಿ ನೇತ್ರಾವತಿ ಕಲ್ಲಾಜೆ, ಪಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಗಣೇಶ್ ಪೈ ಯವರು ಫಲಾನುಭವಿಗಳಿಗೆ ವಿವಿಧ ಸವಲತ್ತುಗಳ ವಿತರಿಸಿ ಶುಭ ಹಾರೈಸಿದರು. ಗ್ರಾಮ ಪಂಚಾಯತ್ ಸದಸ್ಯರಾದ ಜಗದೀಶ್ ಪುರಿಯ, ನಾರಾಯಣ ಕೃಷ್ಣನಗರ, ಶರತ್ ಕುದ್ವ, ಲಕ್ಷ್ಮಣ ಗೌಡ ಬೊಳ್ಳಾಜೆ, ಲಿಖೀತ್ ಪಲ್ಲೋಡಿ, ಚಂದ್ರಶೇಖರ ದೇರಾಜೆ, ಶ್ರೀಮತಿ ವೀಣಾ ಪಂಜ, ಶ್ರೀಮತಿ ದಿವ್ಯ ಪುಂಡಿಮನೆ, ಶ್ರೀಮತಿ ವಿಜಯಲಕ್ಷ್ಮೀ ಜಳಕದಹೊಳೆ, ಶ್ರೀಮತಿ ಪ್ರಮೀಳಾ ಸಂಪ,ಶ್ರೀಮತಿ
ಮಲ್ಲಿಕಾ ಅಳ್ಪೆ, ಮಹಿಳಾ ಮಂಡಲ
ಅಧ್ಯಕ್ಷೆ ಶ್ರೀಮತಿ ಮಾಲಿನಿ, ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಶ್ರೀಧರ್ ಕೆ.ಆರ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.


ಕಾರ್ಯಕ್ರಮದಲ್ಲಿ ಸಿಬ್ಬಂದಿ ಶ್ರೀಮತಿ ಚಿತ್ರಕಲಾ ಪ್ರಾರ್ಥಿಸಿದರು
ಪಂಚಾಯತು ಅಭಿವೃದ್ಧಿ ಅಧಿಕಾರಿಯವರಾದ ಶ್ರೀಧರ್ ಕೆ.ಆರ್ ಇವರು ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.


ಸವಲತ್ತುಗಳ ವಿತರಣೆ:


ಫಲಾನುಭವಿಗಳಿಗೆ ಶೇ. 25 ಮತ್ತು ಶೇ.5ರ ರೂ. 161209 ಅನುದಾನದಲ್ಲಿ 31 ನೀರಿನ ಟ್ಯಾಂಕ್ ಗಳು, ಶೇ.5ರ ರೂ. 9000 ಅನುದಾನದಲ್ಲಿ 12 ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ, ಶೇ 25ರ ರೂ. 10000 ಅನುದಾನದಲ್ಲಿ ವಿದ್ಯಾರ್ಥಿಗಳಿಗೆ ಛತ್ರಿ ಮತ್ತು ಬ್ಯಾಗ್ ರೂ. 49500 ಅನುದಾನದಲ್ಲಿ ವಿದ್ಯಾರ್ಥಿವೇತನ, ವೈದ್ಯಕೀಯ ವೆಚ್ಚಕ್ಕೆ, ಮನೆ ರಿಪೇರಿಗೆ, ಅಂತ್ಯಸಂಸ್ಕಾರಕ್ಕೆ, ಮದುವೆಗೆ ಮತ್ತು ಮನೆ ರಿಪೇರಿಗೆ ಸಹಾಯಧನ ನೀಡಲಾಯಿತು.


ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರು, ಮಾಜಿ ಸದಸ್ಯರು, ಪಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನಿರ್ದೇಶಕರು, ಗ್ರಾಮ ಪಂಚಾಯತ್ ಸಿಬ್ಬಂದಿಗಳು,ಫಲಾನುಭವಿಗಳು ಕಾರ್ಯಕ್ರಮದಲ್ಲಿ ಹಾಜರಿದ್ದರು.