ತಾಲೂಕು ಸರಕಾರಿ ಆಸ್ಪತ್ರೆಯ ಆರೋಗ್ಯ ರಕ್ಷಾ ಸಮಿತಿಯ ಸಾಮಾನ್ಯ ಸಭೆ

0

ಸುಳ್ಯ ತಾಲೂಕು ಸರಕಾರಿ ಆಸ್ಪತ್ರೆಯ ಆರೋಗ್ಯ ರಕ್ಷಾ ಸಮಿತಿಯ ಸಾಮಾನ್ಯ ಸಭೆಯು ಮಾ.19 ರಂದು ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವರಾದ ಎಸ್. ಅಂಗಾರರವರ ಅಧ್ಯಕ್ಷತೆಯಲ್ಲಿ ಆಸ್ಪತ್ರೆಯ ಕಛೇರಿಯಲ್ಲಿ ನಡೆಯಿತು.
ಆಸ್ಪತ್ರೆಯಲ್ಲಿ ಪ್ರಸ್ತುತ ನಡೆಯುತ್ತಿರುವ ಅಭಿವೃದ್ಧಿ ಕಾಮಗಾರಿಗಳ ಪ್ರಗತಿಯ ಬಗ್ಗೆ ಮಾಹಿತಿ ಪಡೆದುಕೊಂಡ ಸಚಿವರು ಶೀಘ್ರದಲ್ಲೇ ಕಾಮಗಾರಿಗಳ ಪೂರ್ಣಗೊಳಿಸುವ ಬಗ್ಗೆ ಸಂಬಂಧಪಟ್ಟವರಿಗೆ ಸೂಚಿಸಿದರು.
ಸಭೆಯಲ್ಲಿ ನಗರ ಪಂಚಾಯತ್ ಅಧ್ಯಕ್ಷರಾದ ವಿನಯ್ ಕುಮಾರ್ ಕಂದಡ್ಕ, ಸಮಿತಿಯ ಸದಸ್ಯರಾದ ಡಾ.ಮನೋಜ್,ಸುಬ್ರಹ್ಮಣ್ಯ ಕೊಡಿಯಾಲಬೈಲು,ಕೇಶವ ಮಾಸ್ಟರ್,ಗಿರೀಶ್ ಕಲ್ಲಗದ್ದೆ, ಸುನಿಲ್ ಕೇರ್ಪಳ, ಸುನಿತಾ ಮೊಂತೆರೋ, ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ.ಕರುಣಾಕರ,ಉಪಸ್ಥಿತರಿದ್ದರು.