ಕಲ್ಮಕಾರಿನ ಮೆಂಟೆಕಜೆಯ ಯುವಕ ಚಿಕಮಗಳೂರಿನಲ್ಲಿ ಆತ್ಮಹತ್ಯೆ

0

ಕಲ್ಮಕಾರಿನ ಯುವಕನೋರ್ವ ಚಿಕ್ಕಮಗಳೂರಿನಲ್ಲಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಮಾ.22 ರಂದು ವರದಿಯಾಗಿದೆ. ಕಲ್ಮಕಾರು ಗ್ರಾಮದ ಮೆಂಟೆಕಜೆ ತೇಜಕುಮಾರ್ ಅವರ ಪುತ್ರ ಲೋಕೇಶ್ ಆತ್ಮಹತ್ಯೆ ಮಾಡಿಕೊಂಡ ಯುವಕ. ಅವರಿಗೆ 25 ವರ್ಷ ವಯಸ್ಸಾಗಿತ್ತು.

ಚಿಕ್ಕಮಗಳೂರಿನಲ್ಲಿ ಜಿಯೋ ಕಂಪೆನಿಯಲ್ಲಿ ಉದ್ಯೋಗಿಯಾಗಿರುವ ಯುವಕ ತನ್ನ ರೂಮಿನಲ್ಲಿ ನೇಣುಬಿಗಿದು ಆತ್ಮಹತ್ಯೆಗೆ ಶರಣಾಗಿದ್ದಾರೆ. ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ. . ಮೃತರು ತಂದೆ ತೇಜಲುಮಾರ,ತಾಯಿ‌ ಕಮಲಾಕ್ಷಿ, ಸಹೋದರ ಪವನ್, ಅಜ್ಜಿ, ಕುಟುಂಬಸ್ಥರು ಮತ್ತು ಬಂಧುಗಳನ್ನು ಅಗಲಿದ್ದಾರೆ.