ಕೋಲ್ಚಾರು ಶಾಲಾ ರಂಗಮಂದಿರ ನಿರ್ಮಾಣಕ್ಕೆ ಧರ್ಮಸ್ಥಳ ಯೋಜನೆ ವತಿಯಿಂದ ದೇಣಿಗೆ

0

ಆಲೆಟ್ಟಿ ಗ್ರಾಮದ ಕೋಲ್ಚಾರು ಸ.ಉ.ಹಿ.ಪ್ರಾಥಮಿಕ ಶಾಲೆಯ ನೂತನ ರಂಗಮಂದಿರ ನಿರ್ಮಾಣಕ್ಕೆ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ರೂ.1.50 ಲಕ್ಷ ಮಂಜೂರುಗೊಂಡಿದ್ದು ಮಂಜೂರಾತಿ ಪತ್ರವನ್ನು ಯೋಜನಾಧಿಕಾರಿ ನಾಗೇಶ್ ಪಿ ಯವರು ಶಾಲೆಯ ಎಸ್.ಡಿ.ಎಂ.ಸಿ.ಅಧ್ಯಕ್ಷ ಸುದರ್ಶನ ಪಾತಿಕಲ್ಲು ಮತ್ತು ಶಾಲಾ ಮುಖ್ಯ ಶಿಕ್ಷಕ ಚಿನ್ನಸ್ವಾಮಿ ಶೆಟ್ಟಿ ಯವರಿಗೆ ಹಸ್ತಾಂತರಿಸಿದರು.

ಈ ಸಂದರ್ಭದಲ್ಲಿ ಕೋಲ್ಚಾರು ಒಕ್ಕೂಟದ ಅಧ್ಯಕ್ಷೆ ಸುನಂಧಿ ಕೋಲ್ಚಾರು, ಆಲೆಟ್ಟಿ ಸೊಸೈಟಿ ಅಧ್ಯಕ್ಷ ಕರುಣಾಕರ ಹಾಸ್ಪಾರೆ, ಸುಳ್ಯ ವಲಯ ಒಕ್ಕೂಟದ ಅಧ್ಯಕ್ಷ ನಿತ್ಯಾನಂದ ಕಲ್ಲೆಂಬಿ, ಯೋಜನೆ ಮೇಲ್ವಿಚಾರಕಿ ಹೇಮಲತಾ, ಸೇವಾ ಪ್ರತಿನಿಧಿ ರೋಹಿಣಿ ಕುಡೆಕಲ್ಲು, ಶಾಲಾ ಶಿಕ್ಷಕರು, ಒಕ್ಕೂಟದ ಪದಾಧಿಕಾರಿಗಳು, ಎಸ್.ಡಿ.ಎಂ.ಸಿ.ಸದಸ್ಯರು ಉಪಸ್ಥಿತರಿದ್ದರು.