ಪೆರಾಜೆ ಗ್ರಾಮ ಪಂಚಾಯತ್ ಗೆ ಗಾಂಧಿ ಗ್ರಾಮ ಪುರಸ್ಕಾರ ಪ್ರದಾನ

0


ಗಾಂಧಿ ಗ್ರಾಮ ಪುರಸ್ಕಾರಕ್ಕೆ ಪಾತ್ರವಾಗಿರುವ ಪೆರಾಜೆ ಗ್ರಾಮ ಪಂಚಾಯತ್ ನ ಆಡಳಿತ ಮಂಡಳಿ ಬೆಂಗಳೂರಿನಲ್ಲಿ ನಡೆದ ಸಮಾರಂಭದಲ್ಲಿ ಗಾಂಧಿ ಗ್ರಾಮ ಪುರಸ್ಕಾರ ಸ್ವೀಕರಿಸಿದರು.
ಇಂದು ಬೆಂಗಳೂರಿನಲ್ಲಿ ನಡೆದ ಸಮಾರಂಭದಲ್ಲಿ ಸಮಾಜ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ಪುರಸ್ಕಾರ ಪ್ರದಾನ ಮಾಡಿದರು.


ಪೆರಾಜೆ ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಚಂದ್ರಕಲಾ ಬಳ್ಳಡ್ಕ, ಪಿ.ಡಿ.ಒ.ಮಹಾದೇವ ಪ್ರಭು,ಸದಸ್ಯರುಗಳಾದ ನಂಜಪ್ಪ ನಿಡ್ಯಮಲೆ,ಉದಯಚಂದ್ರ ಕುಂಬಳಚೇರಿ, ಪ್ರವೀಣ್ ಮಜಿಕೋಡಿ, ಪೂರ್ಣಿಮಾ ಕುಂಡಾಡು ಪುರಸ್ಕಾರ ಸ್ವೀಕರಿಸಿದರು.