ನಾಳೆ (ಮಾ.26 ) ಸುಳ್ಯದಲ್ಲಿ ಮತ್ಸ್ಯವಾಹಿನಿ ತ್ರಿಚಕ್ರ ವಾಹನಗಳ ಲೋಕಾರ್ಪಣೆ

0


ಕೇಂದ್ರ ಸರಕಾರ ಪ್ರಧಾನಮಂತ್ರಿ ಮತ್ಸ್ಯ ಸಂಪದ ಯೋಜನೆಯಡಿ ’ಸ್ವಾವಲಂಬಿ ಬದುಕಿಗಾಗಿ ಸ್ವ ಉದ್ಯೋಗ’ – ಮನೆ ಬಾಗಿಲಿಗೆ ತಾಜಾ ಮೀನು ಸರಬರಾಜು ಮಾಡುವ ಮತ್ಸ್ಯವಾಹಿನಿ ತ್ರಿಚಕ್ರ ವಾಹನಗಳ ಲೋಕಾರ್ಪಣೆ ನಾಳೆ ಮಾ. 26 ರಂದು ಸಂಜೆ 5 ಗಂಟೆಗೆ ಸುಳ್ಯದ ಯುವಜನ ಸಂಯುಕ್ತ ಮಂಡಳಿಯ ಮೈದಾನದಲ್ಲಿ ನಡೆಯಲಿದೆ.


ಕೇಂದ್ರ ಮೀನುಗಾರಿಕೆ, ಪಶು ಸಂಗೋಪನೆ ಮತ್ತು ಹೈನುಗಾರಿಕೆ ಹಾಗೂ ಮಾಹಿತಿ ಪ್ರಸಾರ ರಾಜ್ಯ ಸಚಿವ ಡಾ|| ಎಲ್. ಮುರುಗನ್ ತ್ರಿಚಕ್ರ ವಾಹನಗಳನ್ನು ಲೋಕಾರ್ಪಣೆಗೊಳಿಸುವರು. ದ.ಕ. ಜಿಲ್ಲಾ ಉಸ್ತುವಾರಿ ಸಚಿವ ವಿ. ಸುನಿಲ್‌ಕುಮಾರ್, ಸಮಾಜ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ಗೌರವ ಉಪಸ್ಥಿತರಿರುವರು. ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವ ಎಸ್.ಅಂಗಾರ ಅಧ್ಯಕ್ಷತೆ ವಹಿಸಲಿರುವರು.