ಸುಳ್ಯದ ಪಿಎಫ್‌ಐ ಕಚೇರಿಯ ಜಪ್ತಿಗೆ ಎನ್‌ಐಎ ನೋಟೀಸ್

0


ಬೆಳ್ಳಾರೆಯ ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ ಸೇರಿದಂತೆ ಜನರಲ್ಲಿ ಭಯೋತ್ಪಾದನೆ ಮತ್ತು ಶಾಂತಿ ಮತ್ತು ಕೋಮು ಸೌಹಾರ್ದವನ್ನು ಕದಡುವ ಮತ್ತು ಭಾರತದ ಏಕತೆ, ಸಮಗ್ರತೆ, ಭದ್ರತೆ ಮತ್ತು ಸಾರ್ವಭೌಮತೆಗೆ ಧಕ್ಕೆ ತರಲು ಪ್ರಯತ್ನಿಸುತ್ತಿರುವ ಆರೋಪದಡಿಯಲ್ಲಿ ಸುಳ್ಯದ ಗಾಂಧಿನಗರದಲ್ಲಿರುವ ಪಿಎಫ್‌ಐ ಕಚೇರಿಯನ್ನು ಜಪ್ತಿ ಮಾಡುವ ಕುರಿತು ರಾಷ್ಟ್ರೀಯ ತನಿಖಾದಳ ನೋಟೀಸ್ ಜಾರಿ ಮಾಡಿರುವುದಾಗಿ ತಿಳಿದು ಬಂದಿದೆ.