ಕನಕಮಜಲು: ಬಾಳೆಹಿತ್ತಿಲು ಶ್ರೀ ವಯನಾಟ್ ಕುಲವನ್ ದೈವಂಕಟ್ಟು ಮಹೋತ್ಸವ

0

ಕಾರ್ನೋರ್, ಕೋರಚ್ಚನ್ ಕಂಡನಾರ್ ಕೇಳನ್, ವಯನಾಟ್ ಕುಲವನ್ ದೈವದ ವೆಳ್ಳಾಟ ಹಾಗೂ ಶ್ರೀ ವಿಷ್ಣುಮೂರ್ತಿ ದೈವದ ತೊಡಂಙಲ್

ಇಪ್ಪತ್ತು ಸಾವಿರಕ್ಕೂ ಅಧಿಕ ಭಕ್ತಾದಿಗಳು ಉಪಸ್ಥಿತಿ

ಕನಕಮಜಲು ಗ್ರಾಮದ ಬಾಳೆಹಿತ್ತಿಲು ಶ್ರೀ ವಯನಾಟ್ ಕುಲವನ್ ಶ್ರೀ ವಿಷ್ಣುಮೂರ್ತಿ ದೈವಸ್ಥಾನದಲ್ಲಿ ಶ್ರೀ ವಯನಾಟ್ ಕುಲವನ್ ದೈವಂಕಟ್ಟು ಮಹೋತ್ಸವವು ಅತ್ಯಂತ ವಿಜೃಂಭಣೆಯಿಂದ ಜರುಗುತ್ತಿದ್ದು, ಮಾ.25ರಂದು ಸಂಜೆ ಕಾರ್ನೋರ್ ದೈವದ ವೆಳ್ಳಾಟ, ಬಳಿಕ ಶ್ರೀ ಕೋರಚ್ಚನ್ ದೈವದ ವೆಳ್ಳಾಟ, ರಾತ್ರಿ ಶ್ರೀ ಕಂಡನಾರ್ ಕೇಳನ್ ದೈವದ ವೆಳ್ಳಾಟ ಜರುಗಿತು.


ಬಳಿಕ ದೈವಸ್ಥಾನದ ಸನ್ನಿಧಿಯಲ್ಲಿ ಶ್ರೀ ವಿಷ್ಣುಮೂರ್ತಿ ದೈವದ ತೊಡಂಙಲ್, ಶ್ರೀ ವಯನಾಟ್ ಕುಲವನ್ ದೈವದ ವೆಳ್ಳಾಟ ಜರುಗಿತು.

ಕಂಡನಾರ್ ಕೇಳನ್ ದೈವದ ವೆಳ್ಳಾಟದ ಸಂದರ್ಭದಲ್ಲಿ ಸುಮಾರು ಇಪ್ಪತ್ತು ಸಾವಿರಕ್ಕೂ ಅಧಿಕ ಮಂದಿ ಭಕ್ತಾದಿಗಳು ಉಪಸ್ಥಿತರಿದ್ದು, ದೈವದ ಅಪೂರ್ವ ಕ್ಷಣಗಳನ್ನು ಕಣ್ತುಂಬಿಕೊಂಡರು.

ಸಚಿವ ಎಸ್. ಅಂಗಾರ ಉಪಸ್ಥಿತಿ


ಮೀನುಗಾರಿಕಾ ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವ ಎಸ್. ಅಂಗಾರ, ಬಿಜೆಪಿ ಮಂಡಲ ಸಮಿತಿ ಅಧ್ಯಕ್ಷ ಹರೀಶ್ ಕಂಜಿಪಿಲಿ, ತಾ.ಪಂ. ಮಾಜಿ ಅಧ್ಯಕ್ಷ ಚನಿಯ ಕಲ್ತಡ್ಕ ಸೇರಿದಂತೆ ಬಿಜೆಪಿ ಮುಖಂಡರುಗಳು ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ದೈವಂಕಟ್ಟು ಮಹೋತ್ಸವ ಸಮಿತಿಯ ಎಲ್ಲಾ ಪದಾಧಿಕಾರಿಗಳು, ಆಡಳಿತ ಸಮಿತಿಯ ಎಲ್ಲಾ ಪದಾಧಿಕಾರಿಗಳು, ವಿವಿಧ ಉಪಸಮಿತಿಯ ಸಂಚಾಲಕರುಗಳು, ಸಹಸಂಚಾಲಕರುಗಳು, ಸದಸ್ಯರುಗಳು, ವಿವಿಧ ಬೈಲುವಾರು ಸಮಿತಿಯ ಸಂಚಾಲಕರುಗಳು, ಸಹ ಸಂಚಾಲಕರುಗಳು ಸೇರಿದಂತೆ ಸಹಸ್ರಾರು ಸಂಖ್ಯೆಯಲ್ಲಿ ಭಕ್ತಾದಿಗಳು ಉಪಸ್ಥಿತರಿದ್ದರು.