ದೇವಚಳ್ಳ : ತಳೂರು ಕಾಂಕ್ರೀಟ್ ರಸ್ತೆ ಸಚಿವ ಎಸ್.ಅಂಗಾರರಿಂದ ಉದ್ಘಾಟನೆ

0


ದೇವಚಳ್ಳ ಗ್ರಾಮದ ತಳೂರು ಶ್ರೀ ರಾಜ್ಯ ದೈವ, ಪುರುಷ ದೈವಸ್ಥಾನ ರಸ್ತೆಯ ರೂ.3೦ ಲಕ್ಷ ಅನುದಾನದಲ್ಲಿ ಅಭಿವೃದ್ಧಿಗೊಂಡ ಕಾಂಕ್ರೀಟ್ ರಸ್ತೆಯನ್ನು ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವರಾದ ಎಸ್. ಅಂಗಾರ ಇಂದು ಉದ್ಘಾಟಿಸಿದರು.


ಈ ಸಂದರ್ಭದಲ್ಲಿ ಕರ್ನಾಟಕ ಮೀನುಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷ ಎ.ವಿ.ತೀರ್ಥರಾಮ, ಕುಕ್ಕೇ ಶ್ರೀ ಸುಬ್ರಹ್ಮಣ್ಯ ದೇವಳದ ಆಡಳಿತ ಸಮಿತಿಯ ಅಧ್ಯಕ್ಷ ಅಧ್ಯಕ್ಷರಾದ ಮೋಹನ್ ರಾಮ್ ಸುಳ್ಳಿ, ಬಿಜೆಪಿ ಸುಳ್ಯ ಮಂಡಲ ಅಧ್ಯಕ್ಷ ಹರೀಶ್ ಕಂಜಿಪಿಲಿ, ಪ್ರಮುಖರಾದ ಚಂದ್ರಶೇಖರ ತಳೂರು, ಮಾವಿನ ಕಟ್ಟೆ ಉದಯಗಿರಿ ಶ್ರೀ ಮಹಾವಿಷ್ಣು ಮೂರ್ತಿ ದೈವಸ್ಥಾನದ ಪ್ರಧಾನ ಕಾರ್ಯದರ್ಶಿ ರಾಧಾಕೃಷ್ಣ ಮಾವಿನ ಕಟ್ಟೆ, ಗುತ್ತಿಗಾರು ಪ್ರಾ.ಕೃ.ಪ.ಸ.ಸಂಘದ ನಿರ್ದೇಶಕ ಕೃಷ್ಣಯ್ಯ ಮೂಲೆತೋಟ, ಮುಕುಂದ ಕೊಡಪಾಲ, ಜಯಂತ ತಳೂರು ಸೇರಿದಂತೆ ಊರಿನ ಪ್ರಮುಖರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here