ಎಡಮಂಗಲ: ಪರ್ಲ ಶಾಲೆಯ ನೂತನ ಕಟ್ಟಡದ ಗುದ್ದಲಿ ಪೂಜೆ

0


ಎಡಮಂಗಲ ಪರ್ಲ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ ನೂತನ ಕಟ್ಟಡದ ಗುದ್ದಲಿ ಪೂಜೆ ಕಾರ್ಯಕ್ರಮ ಮಾ. ೨೬ರಂದು ನಡೆಯಿತು. ಎಡಮಂಗಲ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಗೀತಾ ಮರ್ದೂರು ಇವರು ದೀಪ ಬೆಳಗಿಸುವುದರ ಮೂಲಕ ನೆರವೇರಿಸಿದರು.


ಈ ಸಂದರ್ಭದಲ್ಲಿ ಪರ್ಲ ಶಾಲಾ ಮುಖ್ಯ ಶಿಕ್ಷಕರಾದ ಜಯಂತ, ಎಡಮಂಗಲ, ಸಿ ಎ ಬ್ಯಾಂಕ್ ಅಧ್ಯಕ್ಷರಾದ ರಾಮಕೃಷ್ಣ ರೈ ಮಾಲೆಂಗ್ರಿ ,ತಾ.ಪಂ ಸದಸ್ಯರು ಶುಭದಾ ಎಸ್ ರೈ, ಎಡಮಂಗಲ ಗ್ರಾಮ ಪಂಚಾಯತ್ ಸದಸ್ಯರುಗಳು , ಗ್ರಾಮದ ಹಿರಿಯರು, ಎಸ್ ಡಿ ಎಂ ಸಿ ಅಧ್ಯಕರಾದ ಪ್ರವೀಣ್ ಪರ್ಲ/ ಸದಸ್ಯರು ,ಹಳೆ ವಿದ್ಯಾರ್ಥಿ ಸಂಘ ಅಧ್ಯಕ್ಷರು, ಪದಾಧಿಕಾರಿಗಳು, ಶಿಕ್ಷಕ ವೃಂದ,ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸಂಫದ ಸದಸ್ಯರು ಹಾಗೂ ಪೋಷಕರು ಮತ್ತು ಮಕ್ಕಳು ಹಾಗೂ ಊರಿನ ಎಲ್ಲಾ ಅಭಿಮಾನಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here