ಮೇ. 10 ರಂದು ಕರ್ನಾಟಕ ವಿಧಾನ ಸಭಾ ಚುನಾವಣೆ

0

ಒಂದೇ ಹಂತದಲ್ಲಿ ಚುನಾವಣೆ: ಮೇ. 13 ರಂದು ಮತ ಎಣಿಕೆ

ಇಂದಿನಿಂದಲೇ ಚುನಾವಣಾ ನೀತಿ ಸಂಹಿತೆ ಜಾರಿ

ಕರ್ನಾಟಕ ವಿಧಾನ ಸಭಾ ಚುನಾವಣೆಗೆ ದಿನಾಂಕವನ್ನು ಕೇಂದ್ರ ಚುನಾವಣಾ ಆಯೋಗ ಪ್ರಕಟಿಸಿದೆ.

ಎಪ್ರಿಲ್ 13 ರಂದು ಚುನಾವಣಾ ಅಧಿಸೂಚನೆ ಪ್ರಕಟವಾಗಲಿದ್ದು, ಮೇ. 10 ರಂದು ಚುನಾವಣೆ ನಡೆಯಲಿದೆ. ಇಂದಿನಿಂದಲೇ ಚುನಾವಣಾ ನೀತಿ ಸಂಹಿತೆ ಜಾರಿಗೆ ಬರಲಿದ್ದು, ನಾಮಪತ್ರ ಸಲ್ಲಿಗೆ ಎಪ್ರಿಲ್ 20 ಕೊನೆಯ ದಿನ. ಎಪ್ರಿಲ್ 21 ರಂದು ನಾಮಪತ್ರಗಳ ಪರಿಶೀಲನೆ, ಎಪ್ರಿಲ್ 24 ರಂದು ನಾಮಪತ್ರ ಹಿಂತೆಗೆತಕ್ಕೆ ಕೊನೆ ದಿನ. ಮತ ಎಣಿಕೆ ಮೇ 13 ರಂದು ನಡೆಯಲಿದೆ.