ವಿಧಾನಸಭಾ ಚುನಾವಣೆ : ಎ.24 ರೊಳಗೆ ಕೋವಿ ಡೆಪಾಸಿಟ್ ಮಾಡಲು ಜಿಲ್ಲಾಧಿಕಾರಿ ಆದೇಶ

0

ವಿಧಾನಸಭಾ ಚುನಾವಣೆಯ ಹಿನ್ನಲೆಯಲ್ಲಿ ಬೆಳೆ ರಕ್ಷಣೆಗಾಗಿ ಶಸ್ತ್ರಾಸ್ತ್ರ ಪರವಾನಿಗೆ ಹೊಂದಿರುವ ಪರವಾನಗಿದಾರರು ತಮ್ಮ ಶಸ್ತ್ರಾಸ್ತ್ರ ಗಳನ್ನು‌ ಎ.24 ರೊಳಗೆ ಅಧಿಕೃತ ಮದ್ದುಗುಂಡು ವ್ಯಾಪಾರಸ್ಥರಲ್ಲಿ ಅಥವಾ ಹತ್ತಿರದ ಪೋಲೀಸ್ ಠಾಣೆಯಲ್ಲಿ ಡೆಪಾಸಿಟ್ ಇಡುವಂತೆ ಸೂಚನೆ ನೀಡಿದ್ದಾರೆ. ಆಕ್ಷೇಪಣೆ ಇದ್ದಲ್ಲಿ ತಮ್ಮ ಬೆಳೆ ರಕ್ಷಣೆಗಾಗಿ ಆಯುಧದ ತೀರಾ ಅವಶ್ಯಕತೆ ಇದ್ದಲ್ಲಿ ಈ ಆದೇಶ ಹೊರಡಿಸಿದ ಒಂದು ವಾರದೊಳಗೆ ಸಂಬಂಧ ಪಟ್ಟ ದಾಖಲೆಗಳೊಂದಿಗೆ ತಹಶೀಲ್ದಾರರಿಗೆ ಅಹವಾಲು ಸಲ್ಲಿಸಬಹುದು ಎಂದು ಆದೇಶದಲ್ಲಿ ತಿಳಿಸಿದ್ದಾರೆ.