ಕೆವಿಜಿ ಅಮರಜ್ಯೋತಿ ಪದವಿ ಪೂರ್ವ ಕಾಲೇಜಿನಲ್ಲಿ ಕ್ರಾಶ್ ಕೋರ್ಸ್

0

ಕೆವಿಜಿ ಅಮರಜ್ಯೋತಿ ಪದವಿ ಪೂರ್ವ ಕಾಲೇಜಿನಲ್ಲಿ ಕ್ರಾಶ್ ಕೋರ್ಸ್ ಮಾ.30ರಂದು ಪ್ರಾರಂಭಗೊಂಡಿತು. ಒಂದು ತಿಂಗಳ ಕೋರ್ಸ್ ಗೆ ಅಮರಜ್ಯೋತಿ ಪಿ.ಯು. ಕಾಲೇಜು ಸೇರಿದಂತೆ ವಿವಿಧ ಕಾಲೇಜಿನ ವಿದ್ಯಾರ್ಥಿಗಳು ಭಾಗವಹಿಸಿದ್ದಾರೆ. ಕಾಲೇಜಿನ ಪ್ರಾಂಶುಪಾಲರಾದ ಡಾ. ಯಶೋದಾ ರಾಮಚಂದ್ರ ವಿದ್ಯಾರ್ಥಿಗಳಿಗೆ ಸೂಕ್ತ ಸಲಹೆಯನ್ನು ನೀಡಿ ಶುಭ ಹಾರೈಸಿದರು. ಕಾಲೇಜಿನ ಮ್ಯಾನೇಜಿಂಗ್ ಟ್ರಸ್ಟಿ ಡಾ. ರೇಣುಕಾ ಪ್ರಸಾದ್ ಕೆ.ವಿ ಮತ್ತು ಕಾಲೇಜಿನ ಸಿಇಒ ಡಾ. ಉಜ್ವಲ್ ಯು ಜೆ ಕಾರ್ಯಕ್ರಮಕ್ಕೆ ಶುಭಹಾರೈಸಿದರು. ಕಾಲೇಜಿನ ಉಪ ಪ್ರಾಂಶುಪಾಲರಾದ ದೀಪಕ್ ವೈ ಆರ್ ಹಾಗೂ ಬೋಧಕ ಸಿಬ್ಬಂದಿಗಳು ಉಪಸ್ಥಿತರಿದ್ದರು.