ಸಂಪಾಜೆ ಸಹಕಾರಿ ಸಂಘದ ಶತ ಸಂಭ್ರಮದ ಪ್ರಯುಕ್ತ ಡಿಸಿಸಿ ಬ್ಯಾಂಕ್ ನೆರವು ಹಸ್ತಾಂತರ

0

ದ. ಕ. ಸಂಪಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಶತ ಸಂಭ್ರಮದ ಪ್ರಯುಕ್ತ ದ. ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನಿಂದ 10 ಲಕ್ಷವನ್ನು ಜಿಲ್ಲಾ ಬ್ಯಾಂಕಿನ ಅಧ್ಯಕ್ಷರೂ, ಸಂಘದ ಶತಮಾನೋತ್ಸವ ಸಮಿತಿಯ ಗೌರವ ಅಧ್ಯಕ್ಷರೂ ಆಗಿರುವ ಡಾ. ಎಂ ಎನ್ ರಾಜೇಂದ್ರ ಕುಮಾರ್ ಅವರು ಮಂಜೂರು ಮಾಡಿದ್ದು, ಜಿಲ್ಲಾ ಬ್ಯಾಂಕಿನ ನಿರ್ದೇಶಕರಾದ ಶಶಿ ಕುಮಾರ್ ರೈ ಬಾಲ್ಯೊಟ್ಟು ರವರು ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ವೀರೇಂದ್ರ ಕುಮಾರ್ ಜೈನ್ ರವರಿಗೆ ಹಸ್ತಾಂತರಿಸಿದರು.
ಸಂಘದ ಅಧ್ಯಕ್ಷರಾದ ಸೋಮಶೇಖರ ಕೊಯಿಂಗಾಜೆ ಯವರು ಜಿಲ್ಲಾ ಬ್ಯಾಂಕಿನ ಅಧ್ಯಕ್ಷರು ಹಾಗೂ ಆಡಳಿತ ಮಂಡಳಿಯವರಿಗೆ ಕೃತಜ್ಞತೆಯನ್ನು ಸಲ್ಲಿಸಿರುತ್ತಾರೆ.