ಕೆ ವಿ ಜಿ ಅಮರ ಜ್ಯೋತಿ ಪದವಿ ಪೂರ್ವ ಕಾಲೇಜಿನಲ್ಲಿ ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ

0

ಮಾರ್ಚ್ 31 ರಂದು ಕೆವಿಜಿ ಅಮರ ಜ್ಯೋತಿ ಪದವಿಪೂರ್ವ ಕಾಲೇಜಿನಲ್ಲಿ ಪ್ರಥಮ ಪಿಯುಸಿ ಫಲಿತಾಂಶ ಪ್ರಕಟಗೊಂಡಿತ್ತು. ವಾಣಿಜ್ಯ ವಿಭಾಗಕ್ಕೆ ಶೆ.100 ಹಾಗೂ ವಿಜ್ಞಾನ ವಿಭಾಗಕ್ಕೆ ಶೆ.97.59 ಫಲಿತಾಂಶ ಲಭಿಸಿರುತ್ತದೆ.

ವಿಜ್ಞಾನ ವಿಭಾಗದಿಂದ ಪ್ರಥಮ್ ಶೇಖರ್ ಶೇ. 99.33 ಅಂಕ ಗಳೊಂದಿಗೆ ಪ್ರಥಮ ಸ್ಥಾನ ಪಡೆದುಕೊಂಡಿದ್ದಾರೆ.ಹಾಗೂ ಆತ್ಮಿಕ ಶೇ. 99 ಅಂಕಗಳೊಂದಿಗೆ ದ್ವಿತೀಯ ಸ್ಥಾನವನ್ನು ಪಡೆದು ಕೊಂಡಿರುತ್ತಾರೆ. ವಾಣಿಜ್ಯ ವಿಭಾಗದಿಂದ ಸಂಜನ ರಾವ್. ಎಚ್ ಶೇ.98.5 ಅಂಕಗಳೊಂದಿಗೆ ಪ್ರಥಮ ಸ್ಥಾನ ಪಡೆದುಕೊಂಡಿರುತ್ತಾರೆ. ಹಾಗೂ ರೌದ ಅಶ್ರಫ್ ಶೇ.98.16 ಅಂಕಗಳೊಂದಿಗೆ ದ್ವಿತೀಯ ಸ್ಥಾನ ಪಡೆದುಕೊಂಡಿರುತ್ತಾರೆ.

ಕಾಲೇಜಿನ ಮ್ಯಾನೇಜಿಂಗ್ ಟ್ರಸ್ಟಿ ಡಾ. ರೇಣುಕಾ ಪ್ರಸಾದ್ ಕೆ ವಿ ಹಾಗೂ ಕಾಲೇಜಿನ ಸಿಇಒ ಡಾ. ಉಜ್ವಲ್ ಯು ಜೆ ವಿದ್ಯಾರ್ಥಿಗಳಿಗೆ ಶುಭಹಾರೈಸಿದರು. ಕಾರ್ಯಕ್ರಮದಲ್ಲಿ ಪ್ರಾಂಶುಪಾಲರಾದ ಡಾ. ಯಶೋದಾ ರಾಮಚಂದ್ರ ಹಾಗೂ ಉಪ ಪ್ರಾಂಶುಪಾಲರಾದ ದೀಪಕ್ ವೈ ಆರ್ ಹಾಗೂ ಬೋಧಕ ಬೋಧಕೇತರ ಸಿಬ್ಬಂದಿಗಳು ವಿದ್ಯಾರ್ಥಿಗಳಿಗೆ ಶುಭಹಾರೈಸಿದರು.