ಶ್ರೀಮತಿ ವನಿತಾ ಸಚಿತ್ ಕಲ್ಮಡ್ಕ ಹಿರಿಯರ ಕ್ರೀಡಾ ಕೂಟದಲ್ಲಿ ಅಂತಾರಾಷ್ಟ್ರೀಯ ಮಟ್ಟಕ್ಕೆ ಆಯ್ಕೆ

0

ಬೆಂಗಳೂರಿನಲ್ಲಿ ನಡೆದ ಹಿರಿಯರ ಕ್ರೀಡಾ ಕೂಟದಲ್ಲಿ 30 ವರುಷ ವಿಭಾಗದಲ್ಲಿ ಶ್ರೀಮತಿ ವನಿತಾ ಸಚಿತ್ ಕಲ್ಮಡ್ಕ ಇವರು ಗುಂಡೆಸತ ಹಾಗೂ ಹ್ಯಾಮರ್ ತ್ರೋ ವಿಭಾಗದಲ್ಲಿ ಚಿನ್ನದ ಪದಕ ಗಳಿಸಿ ಅಂತಾರಾಷ್ಟ್ರೀಯ ಮಟ್ಟಕ್ಕೆ ಆಯ್ಕೆ ಆಗಿರುತ್ತಾರೆ.

ಪ್ರತಿಷ್ಟಿತ ಆಳ್ವಾಸ್ ವಿದ್ಯಾಸಂಸ್ಥೆ ಮೂಡಬಿದ್ರೆ ಇಲ್ಲಿ ಎಂ ಎಚ್ ಆರ್ ಡಿ ಪದವಿ ಪಡೆದಿರುವ ಇವರು ನಿರಂತರ ಒಂಬತ್ತು ವರ್ಷಗಳ ಕಾಲ ರಾಷ್ಟೀಯ ಕಬಡ್ಡಿ ಪಂದ್ಯಾಟಗಳಲ್ಲಿ ಕರ್ನಾಟಕ ರಾಜ್ಯವನ್ನು ಪ್ರತಿನಿಧಿಸಿದ್ದಾರೆ.

ಸದ್ರಿ ಪ್ರಗತಿ ವಿದ್ಯಾಸಂಸ್ಥೆ ಕಾಣಿಯೂರಿನಲ್ಲಿ ದೈಹಿಕ ಶಿಕ್ಷಕರಾಗಿ ಸೇವೆ ಸಲ್ಲಿಸುತ್ತಾ ಇರುವ ಇವರು ಯುವ ಕ್ರೀಡಾ ಪಟುಗಳಿಗೆ ಹಾಗೂ ವಿದ್ಯಾರ್ಥಿಗಳಿಗೆ ಕಬಡ್ಡಿ ತರಬೇತಿ ನೀಡುವುದರೊಂದಿಗೆ, ರಾಜ್ಯಮಟ್ಟದ ಕಬಡ್ಡಿ ತೀರ್ಪುಗಾರರಾಗಿಯೂ ಕರ್ತವ್ಯ ನಿರ್ವಹಿಸು ತ್ತಿದ್ದಾರೆ.