ಸುಳ್ಯ ಪೊಲೀಸ್ ಠಾಣಾ ಅಧಿಕಾರಿಗಳು ಮತ್ತು ಸಿಬ್ಬಂದಿಗಳಿಗೆ ಆರೋಗ್ಯ ಮಾಹಿತಿ ಕಾರ್ಯಗಾರ

0

ಸುಳ್ಯ ಪೊಲೀಸ್ ಠಾಣಾ ಅಧಿಕಾರಿಗಳು ಮತ್ತು ಸಿಬ್ಬಂದಿಗಳಿಗೆ ಆರೋಗ್ಯ ರಕ್ಷಣಾ ಕಾರ್ಯದ ಬಗ್ಗೆ ಮಾಹಿತಿ ಕಾರ್ಯಗಾರ ಏಪ್ರಿಲ್ ೨ರಂದು ಸುಳ್ಯ ಪೊಲೀಸ್ ಠಾಣೆಯಲ್ಲಿ ನಡೆಯಿತು.


ಖ್ಯಾತ ಆಕ್ಯೂ ಪಂಚರ್ ತರಬೇತುದಾರ ವಿ ಜಿ ಪ್ರವೀಣ್ ಚಿತ್ರದುರ್ಗ ಇವರು ಆರೋಗ್ಯ ರಕ್ಷಣಾ ಕಾರ್ಯದ ಬಗ್ಗೆ ಮತ್ತು ವ್ಯಾಯಾಮದ ವಿಧಾನಗಳ ಬಗ್ಗೆ ಮಾಹಿತಿ ನೀಡಿದರು.
ಸುಳ್ಯ ಪೊಲೀಸ್ ಠಾಣಾ ಉಪನಿರೀಕ್ಷಕ ದಿಲೀಪ್, ತನಿಕಾ ವಿಭಾಗದ ಉಪನಿರೀಕ್ಷಕ ಶಾಹಿದ್ ಅಫ್ರಿದಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.


ಸುಮಾರು ಮೂವತ್ತಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿಗಳು ಅಧಿಕಾರಿಗಳು ಆರೋಗ್ಯ ಮಾಹಿತಿ ಶಿಬಿರದ ಪ್ರಯೋಜನವನ್ನು ಪಡೆದುಕೊಂಡರು.