ಗಡಿ ಪ್ರದೇಶದ ಚೆಕ್ ಪೋಸ್ಟ್ ಹಾಗೂ ಮತಗಟ್ಟೆಗಳಿಗೆ ಚುನಾವಣಾಧಿಕಾರಿ ಭೇಟಿ , ಪರಿಶೀಲನೆ

0

ವಿಧಾನಸಭಾ ಚುನಾವಣಾ ಹಿನ್ನಲೆಯಲ್ಲಿ ಸುಳ್ಯದ ಗಡಿ ಪ್ರದೇಶಗಳಲ್ಲಿ ಆರಂಭಿಸಲಾಗಿರುವ ಚೆಕ್ ಪೋಸ್ಟ್ ಗಳಿಗೆ ಸುಳ್ಯ ವಿಧಾನ ಸಭಾ ಕ್ಷೇತ್ರದ ಚುನಾವಣಾಧಿಕಾರಿ ಅರುಣ್‌ಕುಮಾರ್ ಸಂಗಾವಿಯವರು ಭೇಟಿ ನೀಡಿದರು.

ಸುಳ್ಯ ವಿಧಾನಸಭಾ ಕ್ಷೇತ್ರಕ್ಕೆೆ ಸಂಬಂಧಿಸಿದ ಮಂಡೆಕೋಲು, ಮುರೂರು, ಗುಂಡ್ಯ, ಸಂಪಾಜೆ, ಆಲೆಟ್ಟಿಿ, ಚೆಕ್ ಪೋಸ್ಟ್ ಗಳಿಗೆ ಭೇಟಿ ನೀಡಿ ವಸ್ತು ಸ್ಥಿಿತಿಯ ಬಗ್ಗೆೆ ಪರಿಶೀಲನೆ ನಡೆಸಿ ಕಟ್ಟುನಿಟ್ಟಿಿನ ಪರಿಶೀಲನೆ ನಡೆಸುವಂತೆ ನಿಯೋಜಿತ ಅಧಿಕಾರಿ ಹಾಗೂ ಸಿಬ್ಬಂದಿಗಳಿಗೆ ನಿರ್ದೇಶನ ನೀಡಿದರು. ಅಲ್ಲದೆ ಸುಳ್ಯ ವಿಧಾನಸಭಾ ಕ್ಷೇತ್ರದ ವಿವಿಧ ಮತಗಟ್ಟೆಗಳಿಗೆ ಭೇಟಿ ನೀಡಿ ಮತಗಟ್ಟೆಗಳಲ್ಲಿ ಮೂಲಭೂತ ಸೌಲಭ್ಯಗಳಿಗೆ ಪರಿಶೀಲನೆ ನಡೆಸಿದರು.