ನಂದಕುಮಾರ್ ಅಭಿಮಾನಿಗಳ ಸಭೆಯಲ್ಲಿ ಪಾಲ್ಗೊಳ್ಳದಂತೆ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರ ಸೂಚನೆ

0


ಸುಳ್ಯ ವಿಧಾನಸಭಾ ಕ್ಷೇತ್ರದ ನಿಂತಿಕಲ್ಲಿನಲ್ಲಿ ಎ. ೯ರಂದು ನಂದಕುಮಾರ್ ಅಭಿಮಾನಿಗಳ ಹೆಸರಿನಲ್ಲಿ ಕರೆಯಲಾಗಿರುವ ಸಭೆಗೆ ಕಾಂಗ್ರೆಸ್ ಕಾರ್ಯಕರ್ತರಾರು ಹೋಗಬಾರದೆಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್ ಸೂಚಿಸಿದ್ದಾರೆ. ಈ ಸಮಾವೇಶಕ್ಕೂ ಕಾಂಗ್ರೆಸ್‌ಗೂ ಸಂಬಂಧವಿಲ್ಲ. ಇದು ಅನಧಿಕೃತ ಸಭೆ. ಪಕ್ಷದ ನಾಯಕರಾಗಲಿ, ಕಾರ್ಯಕರ್ತರಾಗಲಿ ಈ ಸಭೆಯಲ್ಲಿ ಭಾಗವಹಿಸಬಾರದು. ಭಾಗವಹಿಸಿದರೆ ಅವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಕೆಪಿಸಿಸಿ ಅಧ್ಯಕ್ಷರು ಮತ್ತು ಕೆಪಿಸಿಸಿ ಕಾರ್ಯಾಧ್ಯಕ್ಷರು ಸೂಚನೆ ನೀಡಿದ್ದಾರೆ ಎಂದು ಹರೀಶ್‌ಕುಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.