ಪಿ.ಬಿ.ಹರೀಶ್ ರೈ ಬರೆದ ಮತಪೆಟ್ಟಿಗೆ ಕೃತಿ ಬಿಡುಗಡೆ

0

ಪತ್ರಕರ್ತ ಪಿ.ಬಿ.ಹರೀಶ್ ರೈಯವರು ಕರಾವಳಿ ಜಿಲ್ಲೆಯ ಸಂಪೂರ್ಣ ರಾಜಕೀಯ ಇತಿಹಾಸ ಹಾಗೂ ವಿವರಗಳುಳ್ಳ ಪುಸ್ತಕ ‘ಮತಪೆಟ್ಟಿಗೆ’ ಇದರ ಬಿಡುಗಡೆ ಇಂದು ಮಂಗಳೂರಿನ ಪ್ರೆಸ್ ಕ್ಲಬ್ ನಲ್ಲಿ ನಡೆಯಿತು.


ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿಯವರು ಕಾರ್ಯಕ್ರಮವನ್ನು ಸಮಾರಂಭವನ್ನು ದೀಪ ಬೆಳಗಿಸಿ ಉದ್ಘಾಟಿಸಿದರು. ಕರಾವಳಿ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಗಣೇಶ ರಾವ್ ಪುಸ್ತಕವನ್ನು ಬಿಡುಗಡೆಗೊಳಿಸಿದರು.


ಮಾಜಿ ಶಾಸಕ ಕೃಷ್ಣ ಪಾಲೆಮಾರ್ ಅಧ್ಯಕ್ಷತೆ ವಹಿಸಿದ್ದರು. ಹಿರಿಯ ಪತ್ರಕರ್ತ ಮನೋಹರ ಪ್ರಸಾದ್, ರೆಡ್ ಕ್ರಾಸ್ ಅಧ್ಯಕ್ಷ ಸಿ.ಎ. ಶಾಂತಾರಾಮ ಶೆಟ್ಟಿ, ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ್ ನಾಯಕ್ ಇಂದಾಜೆ ಮುಖ್ಯ ಅತಿಥಿಗಳಾಗಿದ್ದರು.

ಕೃತಿಕಾರ ಪಿ.ಬಿ.ಹರೀಶ್ ರೈ ಸ್ವಾಗತಿಸಿದರು. ಪುಷ್ಪರಾಜ ಶೆಟ್ಟಿ ಬಿ.ಎನ್. ಕಾರ್ಯಕ್ರಮ ನಿರೂಪಿಸಿದರು.