ಅರಂಬೂರು ಅಂಬಿಕಾ ಮಹಿಳಾ ಮಂಡಲದಲ್ಲಿ ವಿಶ್ವ ಮಹಿಳಾ ದಿನಾಚರಣೆ

0

ಅರಂಬೂರು ಮೂಕಾಂಬಿಕಾ ಭಜನಾ ಮಂದಿರದ ಗೋಪಾಲಕೃಷ್ಣ ಸಭಾಭವನದಲ್ಲಿ ಅಂಬಿಕಾ ಮಹಿಳಾ ಮಂಡಲದ ವತಿಯಿಂದ ವಿಶ್ವ ಮಹಿಳಾ ದಿನಾಚರಣೆಯನ್ನು ಮಾ.26 ರಂದು ನಡೆಸಲಾಯಿತು.
ಸಮಾರಂಭದ ಅಧ್ಯಕ್ಷತೆಯನ್ನು ಮಹಿಳಾ ಮಂಡಲದ ಅಧ್ಯಕ್ಷ ಶ್ರೀಮತಿ ಅಮಿತಾ ಎನ್ ರೈ ವಹಿಸಿದ್ದರು. ಉದ್ಘಾಟನೆಯನ್ನು ಆಲೆಟ್ಟಿ ಗ್ರಾ.ಪಂ. ಅಧ್ಯಕ್ಷೆ ಶ್ರೀಮತಿ ಪುಷ್ಪಾವತಿ ಕುಡೆಕಲ್ಲು ದೀಪ ಬೆಳಗಿಸುವುದರ ಮೂಲಕ ನೆರವೇರಿಸಿದರು. ಮುಖ್ಯ ಅತಿಥಿಗಳಾಗಿ ಆಲೆಟ್ಟಿ ಸಹಕಾರಿ ಸಂಘದ ಮಾಜಿ ಅಧ್ಯಕ್ಷ, ಮೂಕಾಂಬಿಕ ಭಜನಾ ಮಂದಿರದ ಗೌರವಾಧ್ಯಕ್ಷ ಶ್ರೀಪತಿ ಭಟ್ ಹಾಗೂ ಮೂಕಾಂಬಿಕ ಭಜನಾ ಮಂದಿರದ ಅಧ್ಯಕ್ಷ ರತ್ನಾಕರ್ ರೈ ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ಗ್ರಾ. ಪಂ. ಅಧ್ಯಕ್ಷೆ ಶ್ರೀಮತಿ ಪುಷ್ಪಾವತಿ ಕುಡೆಕಲ್ಲು ಹಾಗೂ ಗ್ರಾಮ ಸದಸ್ಯರಾದ ಶ್ರೀಮತಿ ವೇದಾವತಿ ನೆಡ್ಚಿಲು ಮತ್ತು ಕುಮಾರಿ ಅನಿತಾ ರನ್ನು ಮಹಿಳಾ ಮಂಡಲ ವತಿಯಿಂದ ಸನ್ಮಾನಿಸಲಾಯಿತು.
ಮಹಿಳಾ ಮಂಡಲದ ಸದಸ್ಯರಿಗೆ ಸ್ಪರ್ಧೆಗಳನ್ನು ನಡೆಸಿ ವಿಜಯಿಯಾದವರಿಗೆ ಬಹುಮಾನ ವಿತರಿಸಲಾಯಿತು.
ಕುಮಾರಿ ಅನುಷಾ ಎನ್. ಪ್ರಾರ್ಥಿಸಿ, ಉಪಾಧ್ಯಕ್ಷೆ ಶ್ರೀಮತಿ ಚಂದ್ರವತಿ ಬದಿಕಾನ ಕಾರ್ಯಕ್ರಮ ನಿರೂಪಿಸಿದರು. ಅಧ್ಯಕ್ಷೆ ಶ್ರೀಮತಿ ಅಮಿತಾ ರೈ ಸ್ವಾಗತಿಸಿ, ಕಾರ್ಯದರ್ಶಿ ಶ್ರೀಮತಿ ವೇದಾವತಿ ವಂದಿಸಿದರು.